ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ಕುಮಾರ್‌ 124ನೇ ಚಿತ್ರಕ್ಕೆ ಮೆಹ್ರೀನ್‌ ನಾಯಕಿ

Last Updated 21 ಜುಲೈ 2021, 13:39 IST
ಅಕ್ಷರ ಗಾತ್ರ

ಬೆಂಗಳೂರು:ನಟ ಶಿವರಾಜ್‌ಕುಮಾರ್ ನಾಯಕರಾಗಿ ಅಭಿನಯಿಸಲಿರುವ 124ನೇ ಚಿತ್ರಕ್ಕೆ ಖ್ಯಾತ ನಟಿ ಮೆಹ್ರೀನ್ ಪಿರ್‌ಜಾದ ನಾಯಕಿಯಾಗಿ ನಟಿಸಲಿದ್ದಾರೆ.

ಈಗಾಗಲೇ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿರುವ ಮೆಹ್ರೀನ್, ಎಫ್‌2 ಹಾಗೂ ಪಟಾಸ್‌ ಚಿತ್ರಗಳ ಮೂಲಕ ಜನಮನಸೂರೆಗೊಂಡಿದ್ದಾರೆ. ಸದ್ಯ ಅನಿಲ್ ರವಿಪುಡಿ ಅವರ ಎಫ್‌3 ಚಿತ್ರದಲ್ಲಿ ಮೆಹ್ರೀನ್‌ ತಲ್ಲೀನರಾಗಿದ್ದಾರೆ.

ಚಿತ್ರದ ಕಥೆ ಇಷ್ಟಪಟ್ಟಿರುವ ಮೆಹ್ರೀನ್, ತಾವು ಈ ಚಿತ್ರದಲ್ಲಿ ನಟಿಸುವುದಾಗಿ ಹೇಳಿದಾರಂತೆ.ರಾಮ್ ದುಲಿಪುಡಿ ನಿರ್ದೇಶನದಲ್ಲಿ ಶಿವರಾಜ್‌ಕುಮಾರ್‌ ಅವರ 124ನೇ ಚಿತ್ರ ತೆರೆ ಮೇಲೆ ಬರಲಿದ್ದು, ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ.

70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ‘ಟಗರು’ ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ. ಖ್ಯಾತ ನಟರಾದ ನಾಜರ್, ಸಂಪತ್ ಹಾಗೂ ಮಂಗ್ಲಿ(ಗಾಯಕಿ) ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT