ಶನಿವಾರ, ಜನವರಿ 29, 2022
18 °C

ವಿಕ್ಕಿ-ಕತ್ರಿನಾ ಮದುವೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಮಿಕಾ ಸಿಂಗ್‌ ಬೇಸರ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಕತ್ರಿನಾ ಕೈಫ್‌ ಹಾಗೂ ವಿಕ್ಕಿ ಕೌಶಲ್ ಮದುವೆ ಸಮಾರಂಭಕ್ಕೆ ಆಮಂತ್ರಣವಿದ್ದರೂ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಬಾಲಿವುಡ್‌ನ ಖ್ಯಾತ ಗಾಯಕ ಮಿಕಾ ಸಿಂಗ್‌ ತಿಳಿಸಿದ್ದಾರೆ. 

ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ‘ಕತ್ರಿನಾ ಹಾಗೂ ವಿಕ್ಕಿ ಮದುವೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲಾಗಿದೆ. ಆದರೆ, ಕೆಲಸದಲ್ಲಿ ಬ್ಯುಸಿ ಇರುವುದರಿಂದ ನನಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಈ ಕಾರ್ಯಕ್ರಮವನ್ನು ನಾನು ಮಿಸ್‌ ಮಾಡಿಕೊಳ್ಳುತ್ತಿದ್ದೇನೆ‘ ಎಂದು ತಿಳಿಸಿದ್ದಾರೆ.  

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ತಮ್ಮ ವಿವಾಹದ ಅತಿಥಿಗಳ ಪಟ್ಟಿಯನ್ನು 120ಕ್ಕೆ ಸೀಮಿತಗೊಳಿಸಿದ್ದಾರೆ ಎಂದು ವರದಿಯಾಗಿದೆ.ಡಿಸೆಂಬರ್ 7 ರಿಂದ 9ರವರೆಗೆ ರಾಜಸ್ಥಾನದಲ್ಲಿ ಕತ್ರಿನಾ–ವಿಕ್ಕಿ ವಿವಾಹ ಸಮಾರಂಭ ನಡೆಯತ್ತಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು