ತೆಲುಗಿನಲ್ಲಿ ‘ಹನುಮಾನ್’ ಚಿತ್ರದ ಮೂಲಕ ಮೋಡಿ ಮಾಡಿದ್ದ ನಟ ತೇಜ್ ಸಜ್ಜಾ ಅಭಿನಯದ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಮಿರಾಯ್’ ಸೆ.5ರಂದು ತೆರೆಕಾಣಲಿದೆ. ಬುಧವಾರ(ಮೇ 28) ಚಿತ್ರದ ಟೀಸರ್ ಬಿಡುಗಡೆಯಾಗಿದೆ.

‘ಕಾರ್ತಿಕೇಯ’, ‘ಕಾರ್ತಿಕೇಯ-2’, ‘ಧಮಾಕ’ ಸೇರಿದಂತೆ ಹಲವು ಹಿಟ್ ಚಿತ್ರಗಳ ಸಾರಥಿ ಕಾರ್ತಿಕ್ ಗಟ್ಟಮ್ನೇನಿ ಸಜ್ಜಾ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಹನುಮಾನ್’ನಲ್ಲಿ ಸೂಪರ್ ಹೀರೊ ಆಗಿದ್ದ ತೇಜ್ ಈಗ ‘ಮಿರಾಯ್’ನಲ್ಲಿ ಸೂಪರ್ ಯೋಧನಾಗಿದ್ದಾರೆ. ‘ಮಿರಾಯ್’ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯ ಕಥೆಗಳನ್ನು ಬಿಚ್ಚಿಡುವ ಕಥೆಯನ್ನು ಸಿನಿಮಾ ಹೊಂದಿದೆ ಎಂದಿದೆ ಚಿತ್ರತಂಡ. ಬಹುಭಾಷಾ ನಟ ಜಯರಾಮ್, ಶ್ರಿಯಾ ಶರಣ್, ಜಗಪತಿ ಬಾಬು ಚಿತ್ರದಲ್ಲಿದ್ದಾರೆ. ರಿತಿಕಾ ನಾಯಕ್ ಚಿತ್ರದ ನಾಯಕಿ. ಮಂಚು ಮನೋಜ್ ಖಳನಾಯಕನಾಗಿ ಬಣ್ಣಹಚ್ಚಿದ್ದಾರೆ.

ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ದೃಶ್ಯಗಳಿರಲಿದ್ದು, ವಿಶೇಷವಾಗಿ ಈ ಚಿತ್ರವು 2D ಮತ್ತು 3D ಮಾದರಿಯಲ್ಲಿ ತೆರೆಕಾಣಲಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ, ಗೌರ ಹರಿ ಸಂಗೀತ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.