ಶುಕ್ರವಾರ, ಮೇ 20, 2022
26 °C

ನಟಿ ರೈಮಾ ಶಿಮು ಮೃತದೇಹ ಪತ್ತೆ: ಪತಿ, ಕಾರು ಚಾಲಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಢಾಕಾ: ಬಾಂಗ್ಲಾದೇಶ ನಟಿ ರೈಮಾ ಶಿಮು ಅವರ ಮೃತದೇಹ ಇಲ್ಲಿನ ಹೊರವಲಯದಲ್ಲಿ ಪತ್ತೆಯಾಗಿದೆ ಎಂದು ಬಾಂಗ್ಲಾ ಪೊಲೀಸರು ತಿಳಿಸಿದ್ದಾರೆ.

ಹಜಾರತ್‌ಪುರ ಸಮೀಪದಲ್ಲಿರುವ ಸೇತುವೆ ಬಳಿ ರೈಮಾ ಅವರ ಮೃತದೇಹ ಪತ್ತೆಯಾಗಿದೆ. ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ರೈಮಾ ಪತಿ ಹಾಗೂ ಕುಟುಂಬದವರು ದೂರ ದಾಖಲಿಸಿದ್ದರು.

ಮೃತದೇಹವನ್ನು ವಶಕ್ಕೆ ಪಡೆದಿರುವ ಪೊಲೀಸರು ಶವ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರಗೆ ಕಳುಹಿಸಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ರೈಮಾ ಪತಿ ಹಾಗೂ ಕಾರು ಚಾಲಕನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ರೈಮಾ ಅವರು 1998ರಲ್ಲಿ ಸಿನಿಮಾ ಕ್ಷೇತ್ರಕ್ಕೆ ಪಾದರ್ಪಣೆ ಮಾಡಿದರು. ಅವರು 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು