ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಾಗೂ ಲಕ್ಷ್ಮೀ ನಟನೆಯ ‘ಮಿಥುನಂ’ ಸಿನಿಮಾ ಜೂನ್ 5ರಂದು ಕನ್ನಡದಲ್ಲಿ ಬಿಡುಗಡೆಯಾಗಲಿದೆ.

ತನಿಕೆಳ್ಳ ಭರಣಿ ನಿರ್ದೇಶನದ ತೆಲುಗು ಸಿನಿಮಾದ ಕನ್ನಡ ಅವತರಣಿಕೆ ಇದಾಗಿದೆ. ಮಧುಸೂದನ್ ಹವಾಲ್ದಾರ್ ಹಾಗೂ ತ್ರಿವಿಕ್ರಮ ಜೋಶಿ ಅವರ ಸಾರಥ್ಯದಲ್ಲಿ ಈ ಚಿತ್ರದ ಕನ್ನಡದ ಅವತರಣಿಕೆ ಸಿದ್ಧವಾಗಿದೆ. ಶ್ರೀದೇವಿ ಶ್ರೀನಿವಾಸ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಕನ್ನಡ ಅವತರಣಿಕೆಯ ಟೀಸರ್ ಬಿಡುಗಡೆಯಾಗಿದೆ. ವಿದೇಶದಲ್ಲಿರುವ ಮಕ್ಕಳು ತಂದೆ ತಾಯಿಯನ್ನು ವೃದ್ಧಾಪ್ಯದ ಸಮಯದಲ್ಲೂ ನೋಡಿಕೊಳ್ಳಲು ಬರದೇ ಇದ್ದಾಗ ಆ ತಂದೆ ತಾಯಿ ಪರಿಸ್ಥಿತಿ ಹೇಗಿರುತ್ತದೆ ಎನ್ನುವುದು ಈ ಚಿತ್ರದ ಕಥಾ ಸಾರಾಂಶವಾಗಿದೆ.

‘ಈ ಚಿತ್ರ ಹದಿನೈದು ವರ್ಷಗಳ ಹಿಂದೆ ಬಿಡುಗಡೆಯಾಗಿತ್ತು. ತನಿಕೆಳ್ಳ ಭರಣಿ ಅವರ ಬಳಿ ಈ ಸಿನಿಮಾದ ಹಕ್ಕುಗಳನ್ನು ಕೇಳಿದಾಗ ನಿರ್ಮಾಪಕರನ್ನು ಕೇಳಲು ಸೂಚಿಸಿದರು. ನಿರ್ಮಾಪಕರು ಕನ್ನಡದಲ್ಲಿ ಬಿಡುಗಡೆ ಮಾಡುವುದಕ್ಕೆ ಖುಷಿಯಿಂದ ಹಕ್ಕು ನೀಡಿದರು. ಚಿತ್ರವನ್ನು ಆರು ತಿಂಗಳಲ್ಲಿ ಬಿಡುಗಡೆ ಮಾಡಬೇಕು ಮತ್ತು ಎಸ್ಪಿಬಿ ಅವರ ದನಿಗೆ ಧಕ್ಕೆ ಬಾರದಂತೆ ಡಬ್ಬಿಂಗ್ ಮಾಡಿಸಬೇಕು ಎಂಬ ಷರತ್ತು ಹಾಕಿದ್ದರು’ ಎಂದು ಮಧುಸೂದನ್ ಹವಾಲ್ದಾರ್ ತಿಳಿಸಿದರು.v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-68895510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.