ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಿಥ್ಯ’ ಜಗತ್ತಿನಲ್ಲಿ ರಕ್ಷಿತ್‌ ಶೆಟ್ಟಿ

Last Updated 11 ಆಗಸ್ಟ್ 2022, 11:45 IST
ಅಕ್ಷರ ಗಾತ್ರ

ಪರಂವಃ ಸ್ಟುಡಿಯೋಸ್ ಹೊಸ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಚಿತ್ರವನ್ನು ಸೆಟ್ಟೇರಿಸಿದೆ. ರಕ್ಷಿತ್‌ ಶೆಟ್ಟಿ ಈ ಚಿತ್ರದ ನಿರ್ಮಾಪಕರು. ಸುಮಂತ್‌ ಭಟ್‌ ನಿರ್ದೇಶನದಲ್ಲಿ 11 ವರ್ಷದ ಬಾಲಕನ ಕಥೆ ತೆರೆ ಮೇಲೆ ಬರಲಿದೆ.

ಬಾಲಕನ ನೋವು–ನಲಿವು ಈ ಚಿತ್ರದ ಕಥೆಯಂತೆ. ತಂದೆ-ತಾಯಿಯ ನಿಧನದ ನಂತರ, ಅವರ ನೆನಪುಗಳಿಂದ ಹೊರಬರಲಾರದ ಪುಟ್ಟ ಬಾಲಕನೊಬ್ಬ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ಈ ‘ಮಿಥ್ಯ’.

ಮೂಲತಃ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿದ್ದ ಸುಮಂತ್ ಭಟ್‌ ಅವರಿಗೆ ಸಿನಿಮಾ ಎನ್ನುವುದು ಆಸಕ್ತಿ. ಇದಕ್ಕೂ ಮುನ್ನ ಪರಂವಃ ಸ್ಟುಡಿಯೋಸ್ ನಿರ್ಮಾಣದ ‘ಏಕಂ’ ಎಂಬ ವೆಬ್‌ ಸಿರೀಸ್‌ನಏಳು ಕಂತುಗಳಲ್ಲಿ, ನಾಲ್ಕು ಕಂತುಗಳನ್ನು ಬರೆದು ನಿರ್ದೇಶಿಸಿದವರು ಅವರು. ಜತೆಗೆ ಪರಂವಃ ಕಥಾತಂಡದಲ್ಲಿ ಸಕ್ರಿಯರಾಗಿದ್ದವರು. ಈಗ ಅವರು ಸ್ವತಂತ್ರ ನಿರ್ದೇಶಕರಾಗಿ ‘ಮಿಥ್ಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತು 'ವಿಕ್ರಾಂತ್ ರೋಣ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್ ಶೆಟ್ಟಿ, ಇಲ್ಲಿ ಮಿಥುನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಪ್ರಕಾಶ್ ತೂಮಿನಾಡು, ರೂಪಾ ವರ್ಕಾಡಿ ತಾರಾಗಣದಲ್ಲಿದ್ದಾರೆ.

‘ಮಿಥ್ಯ’ ಚಿತ್ರಕ್ಕೆ ಉದಿತ್ ಖುರಾನ ಅವರ ಛಾಯಾಗ್ರಹಣವಿದೆ. ಮಿಥುನ್ ಮುಕುಂದನ್ ಅವರ ಸಂಗೀತವಿದೆ. ಭುವನೇಶ್ ಮಣಿವಣ್ಣನ್ ಸಂಕಲನಕಾರರಾಗಿ, ಶ್ರೇಯಾಂಕ್ ನಂಜಪ್ಪ ಧ್ವನಿ ವಿನ್ಯಾಸಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT