ಶನಿವಾರ, ಅಕ್ಟೋಬರ್ 31, 2020
28 °C

ದೀಪಿಕಾ, ಶ್ರದ್ಧಾ, ಸಾರಾ ಅಲಿ ಖಾನ್‌ ಮೊಬೈಲ್‌ ವಶಕ್ಕೆ ಪಡೆದ ಎನ್‌ಸಿಬಿ

ಎಎನ್ಐ Updated:

ಅಕ್ಷರ ಗಾತ್ರ : | |

ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್‌

ಮುಂಬೈ: ಬಾಲಿವುಡ್ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದ ಡ್ರಗ್ಸ್‌ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಮಾದಕವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ), ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌, ರಕುಲ್ ಪ್ರೀತ್ ಮತ್ತು ಇತರರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್, ಕರಿಷ್ಮಾ ಪ್ರಕಾಶ್, ಸಿಮೋನೆ ಕಂಬಟ್ಟ ಮತ್ತು ಜಯ ಷಾ ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಸಿಬಿ ಅಧಿಕಾರಿ ತಿಳಿಸಿದ್ದಾರೆ.

ಬಾಲಿವುಡ್‌ನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 18ಕ್ಕೂ ಹೆಚ್ಚು ಜನರನ್ನು ಎನ್‌ಸಿಬಿ ಬಂಧಿಸಿದೆ. ಕರಿಷ್ಮಾ ಪ್ರಕಾಶ್, ಸಾರಾ ಅಲಿ ಖಾನ್, ದೀಪಿಕಾ ಪಡುಕೋಣೆ ಮತ್ತು ಶ್ರದ್ಧಾ ಕಪೂರ್ ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಕ್ಷಿತಿಜ್ ಪ್ರಸಾದ್ ಅವರನ್ನು ಪ್ರಶ್ನಿಸಿದ ನಂತರ ಬಂಧಿಸಲಾಗಿದೆ. ಇಂದು ಯಾವುದೇ ಹೊಸ ಸಮನ್ಸ್ ಹೊರಡಿಸಲಾಗಿಲ್ಲ ಎಂದು ಎನ್‌ಸಿಬಿಯ ನೈರುತ್ಯ ವಲಯದ ಉಪ ಡಿಜಿ ಮುತಾ ಅಶೋಕ್ ಜೈನ್ ಶನಿವಾರ ತಿಳಿಸಿದ್ದಾರೆ.

ಇದನ್ನೂ ಓದಿ: 

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಶನಿವಾರ ಧರ್ಮ ಪ್ರೊಡಕ್ಷನ್ಸ್ ಕಾರ್ಯನಿರ್ವಾಹಕ ನಿರ್ಮಾಪಕ ಕ್ಷಿತಿಜ್ ರವಿ ಪ್ರಸಾದ್ ಅವರನ್ನು ಬಂಧಿಸಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ಕೈಗೊಂಡಿದ್ದ ಜಾರಿ ನಿರ್ದೇಶನಾಲಯವು ಡ್ರಗ್ಸ್ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಎನ್‌ಸಿಬಿಗೆ ಅಧಿಕೃತ ಸೂಚನೆ ನೀಡಿದ ನಂತರ ಎನ್‌ಸಿಬಿ ತನಿಖೆ ತನಿಖೆ ಆರಂಭಿಸಿತ್ತು. ತನಿಖೆಯಲ್ಲಿ ಮಾದಕವಸ್ತು ಸೇವನೆ, ಸಂಗ್ರಹಣೆ, ಬಳಕೆ ಮತ್ತು ಸಾರಿಗೆಗೆ ಸಂಬಂಧಿಸಿದ ಹಲವು ವಿಚಾರಗಳು ಹೊರಬಂದಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು