ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೆಂಕ್ಯಾ’ ಅಂಗಳಕ್ಕೆ ಶಿಮ್ಲಾ ಸುಂದರಿ ‘ರೂಪಾಲಿ ಸೂದ್‌’

Published 3 ಏಪ್ರಿಲ್ 2024, 13:27 IST
Last Updated 3 ಏಪ್ರಿಲ್ 2024, 13:27 IST
ಅಕ್ಷರ ಗಾತ್ರ

ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ನಿರ್ದೇಶಿಸಿದ್ದ ಸಾಗರ್‌ ಪುರಾಣಿಕ್‌ ನಟಿಸಿ, ನಿರ್ದೇಶಿಸುತ್ತಿರುವ ಹೊಸ ಸಿನಿಮಾಗೆ ಶಿಮ್ಲಾ ಬೆಡಗಿಯ ಪ್ರವೇಶವಾಗಿದೆ.  

‘ಡೊಳ್ಳು’ ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ಅವರೇ ‘ವೆಂಕ್ಯಾ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಈ ಸಿನಿಮಾದಲ್ಲಿ ಬಣ್ಣಹಚ್ಚಿದ್ದು, ಇದೀಗ ಚಿತ್ರತಂಡಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ರೂಪಾಲಿ ಸೂದ್‌ ಈ ಚಿತ್ರದಲ್ಲಿ ನಟಿಸುತ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್‌ ಕ್ಷೇತ್ರಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆಗೆ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ರೂಪಾಲಿ ಇದೀಗ ‘ವೆಂಕ್ಯಾ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ರೂಪಾಲಿ ಈಗಾಗಲೇ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ’ ಎಂದಿದೆ ಚಿತ್ರತಂಡ. ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್‌ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿದ್ದೆವು. ಇದು ನನ್ನ ಸಿನಿಮಾ ವೃತ್ತಿಜೀವನಕ್ಕೆ ಅದ್ಭುತ ಆರಂಭ’ ಎಂದಿದ್ದಾರೆ ರೂಪಾಲಿ. ಉತ್ತರ ಕರ್ನಾಟಕದ ಕಥೆ ಆಧಾರಿಸಿ ಮೂಡಿಬರುತ್ತಿರುವ ‘ವೆಂಕ್ಯಾ’ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿ.ಎಸ್. ಬರೆದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT