ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆಯನ್ನು ಶೇ 50 ನಿರ್ಬಂಧ ಮಾಡಿರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್–19 ಕಾರಣದಿಂದ ಏಪ್ರಿಲ್ 16ಕ್ಕೆ ಬಿಡುಗಡೆಯಾಗಬೇಕಿದ್ದ ‘ಮೋಕ್ಷ’ ಚಿತ್ರವನ್ನು ಮುಂದೂಡಲಾಗಿದೆ.

ಸರ್ಕಾರ ಹೊಸ ಆದೇಶ ಹೊರಡಿಸಿರುವ ಕಾರಣ, ಏಪ್ರಿಲ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ಸಲಗ, ಕೋಟಿಗೊಬ್ಬ 3 ಮುಂತಾದ ಬಿಗ್ಬಜೆಟ್ ಚಿತ್ರಗಳ ಬಿಡುಗಡೆಯೂ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ‘ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ತೋರಿಸುತ್ತಿದೆ. ಆ ಕಾರಣದಿಂದ ಚಿತ್ರವನ್ನು ಈ ವೈರಸ್ ಆರ್ಭಟ ಕಡಿಮೆಯಾಗುವವರೆಗೂ ಬಿಡುಗಡೆ ಮಾಡುವುದಿಲ್ಲ’ ಎಂದು ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಸಮರ್ಥ್ ನಾಯಕ್ ಹೇಳಿದ್ದಾರೆ.

ಬಾಲಿವುಡ್ನಲ್ಲಿ ಗುರುತಿಸಿಕೊಂಡಿರುವ ನಾಯಕ ಮೋಹನ್ ಧನರಾಜ್ ಹಾಗೂ ಆರಾಧ್ಯ ಲಕ್ಷ್ಮಣ್ ಮೋಕ್ಷ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತಾರಕ್ ಪೊನ್ನಪ್ಪ, ಭೂಮಿ ಅಜ್ಞಾನಿ, ಪ್ರಶಾಂತ್ ನಟನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.