ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೋಕ್ಷ’ ಚಿತ್ರದ ಟ್ರೇಲರ್ ಬಿಡುಗಡೆ

Last Updated 29 ಮಾರ್ಚ್ 2021, 13:11 IST
ಅಕ್ಷರ ಗಾತ್ರ

ಸಸ್ಪೆನ್ಸ್ ಥ್ರಿಲ್ಲರ್‌ ಕಥಾ ಹಂದರದ ಚಿತ್ರ ‘ಮೋಕ್ಷ’ದ ಟ್ರೇಲರ್‌ ಬಿಡುಗಡೆ ಆಗಿದೆ. ಡಿ‘ಬೀಟ್ಸ್‌ನ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆ ಆಗಿದೆ.

ಟ್ರೇಲರ್‌ಗೆ, ಕಿಚ್ಚ ಸುದೀಪ್‌, ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್, ಯೋಗರಾಜ್‌ ಭಟ್‌, ಸಿಂಪಲ್‌ ಸುನಿ, ರಿಶಿ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದರು.ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಸಮರ್ಥ್ ನಾಯಕ್, ‘ನಮ್ಮ ಚಿತ್ರ ತಾಂತ್ರಿಕವಾಗಿ ಅದ್ದೂರಿತನದಿಂದ ಮೂಡಿಬಂದಿದೆ. ಅದಕ್ಕೆ ಕಾರಣ ನಮ್ಮ ಚಿತ್ರದ ತಂತ್ರಜ್ಞರು. ಟ್ರೇಲರ್ ಇಂದು ಬಿಡುಗಡೆಯಾಗಿದ್ದು, ಚಿತ್ರರಂಗದ ಗಣ್ಯರು ಹಾಗೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಪ್ರಿಲ್ 16 ಮೋಕ್ಷ ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ.‌ ಕನ್ನಡ ಸಿನಿರಸಿಕರು ನಮ್ಮ ಚಿತ್ರ ವೀಕ್ಷಿಸಿ, ಪ್ರೋತ್ಸಾಹಿಸಿ ಎಂದರು. ಸಮರ್ಥ್ ನಾಯಕ್ ಈ ಚಿತ್ರದ ನಿರ್ಮಾಪಕರೂ ಹೌದು.

‘ಬಾಲಿವುಡ್‌ನಲ್ಲಿ ಗುರುತಿಸಿಕೊಂಡಿರುವ ನಾಯಕ ಮೋಹನ್ ಧನರಾಜ್ ಅವರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಸಸ್ಪೆನ್ಸ್ ಚಿತ್ರವಾಗಿರುವುದರಿಂದ ಚಿತ್ರ ನೋಡಿದ ಮೇಲೆ ಕಥೆ ಏನು ಎಂದು ತಿಳಿಯುವುದು. ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವಿರಲಿ’ ಎಂದರು ಮೋಹನ್ ಧನರಾಜ್.

ನಾಯಕಿಯಾಗಿ ಕಾಣಿಸಿಕೊಂಡಿರುವ ಆರಾಧ್ಯ ಲಕ್ಷ್ಮಣ್ ಅವರು ತಮ್ಮ ಪಾತ್ರದ ಬಗ್ಗೆ ಮೆಚ್ಚುಗೆ ಮಾತುಗಳಾಡಿದರು.
ಮೋಕ್ಷ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ತಾರಕ್ ಪೊನ್ನಪ್ಪ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಕರ್ನಾಟಕ ಹಾಗೂ ಗೋವಾದ ಸುಂದರಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ‌.

‘ಈ ಚಿತ್ರದಲ್ಲಿ ಮಾಸ್ಕ್ ಮ್ಯಾನ್ ಎಂಬ ಪಾತ್ರವೊಂದಿದೆ. ಮಾಸ್ಕ್ ಮ್ಯಾನ್‌ನಿಂದ ನಾಯಕ, ನಾಯಕಿ ಬಹಳ ತೊಂದರೆ ಅನುಭವಿಸುತ್ತಿರುತ್ತಾರೆ. ಈ ವಿಷಯ ತಿಳಿದು ಪೊಲೀಸ್ ಅಧಿಕಾರಿ ಪಾತ್ರಧಾರಿಯಾದ ನಾನು ಏನು ಮಾಡುತ್ತೇನೆ ಎಂಬುದನ್ನು ಚಿತ್ರದಲ್ಲಿ ವೀಕ್ಷಿಸಿ’ ಎಂದರು. ಛಾಯಾಗ್ರಾಹಕರ ಪರವಾಗಿ ಜೋಮ್ ಜೋಸೆಫ್ ತಮ್ಮ ಅಭಿಪ್ರಾಯ ಹಂಚಿಕೊಂಡರು. ಜಯಂತ್ ಕಾಯ್ಕಿಣಿ, ಕುಮಾರ್ ದತ್ ಅವರು ಬರೆದಿರುವ ಎರಡು ಹಾಡುಗಳಿಗೆ ಕಿಶನ್ ಮೋಹನ್ ಹಾಗೂ ಸಚಿನ್ ಬಾಲು ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಕಿಶನ್ ಮೋಹನ್ ಅವರದು. ಗುರುಪ್ರಶಾಂತ್ ರೈ, ಜೋಮ್ ಜೋಸಫ್, ಕಿರಣ್ ಹಂಪಾಪುರ ಛಾಯಾಗ್ರಹಣ ಹಾಗೂ ವರುಣ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಮೋಹನ್ ಧನರಾಜ್ ಮತ್ತು ಆರಾಧ್ಯ ಲಕ್ಷ್ಮಣ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ತಾರಕ್ ಪೊನ್ನಪ್ಪ, ಭೂಮಿ ಅಜ್ಞಾನಿ, ಪ್ರಶಾಂತ್ ನಟನ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT