ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮ್ಮನಾಗುವ ಖುಷಿ: ‘ಬೇಬಿ ಬಂಪ್’ ಫೋಟೊ ಹಂಚಿಕೊಂಡ ಬಾಲಿವುಡ್ ನಟಿ ಬಿಪಾಶಾ ಬಸು

Last Updated 5 ನವೆಂಬರ್ 2022, 10:01 IST
ಅಕ್ಷರ ಗಾತ್ರ

ಮುಂಬೈ: ಮಗುವಿನ ನಿರೀಕ್ಷೆಯಲ್ಲಿರುವ ಬಾಲಿವುಡ್ ನಟಿ ಬಿಪಾಶಾ ಬಸು, ಬೇಬಿ ಬಂಪ್ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಫೋಟೊವನ್ನು ಹಂಚಿಕೊಳ್ಳುವುದರ ಜೊತೆಗೆ ಭಾವನಾತ್ಮಕ ಟಿಪ್ಪಣಿಯನ್ನು ಬರೆದುಕೊಂಡಿದ್ದಾರೆ. ‘ಎಲ್ಲಾ ಸಮಯದಲ್ಲೂ ನಿಮ್ಮನ್ನು ನೀವು ಪ್ರೀತಿಸಿ, ನೀವು ಜೀವಿಸುವ ದೇಹವನ್ನು ಪ್ರೀತಿಸಿ’ ಎಂದು ಬರೆದುಕೊಂಡಿದ್ದಾರೆ.

ಇದೀಗ ಬಿಪಾಶಾ ಅವರ ಬೇಬಿ ಬಂಪ್ ಫೋಟೊಗಳುಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಈ ಹಿಂದೆ ಬಿಪಾಶಾ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆಗಸ್ಟ್‌ನಲ್ಲಿ ತಾವು ಗರ್ಭಿಣಿಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬಿಪಾಶಾ ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ 2016ರ ಏಪ್ರಿಲ್ 30ರಂದು ವಿವಾಹವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT