ಸೋಮವಾರ, ಆಗಸ್ಟ್ 8, 2022
25 °C

ಇ.ಡಿ ವಿಚಾರಣೆಯಲ್ಲಿ ಜಾಕ್ವೆಲಿನ್‌: ‘ವಿಕ್ರಾಂತ್‌ ರೋಣ’ ಸಿನಿಮಾ ಪ್ರಚಾರಕ್ಕೆ ಗೈರು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ವಂಚನೆ ಆರೋಪ ಎದುರಿಸುತ್ತಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಹಾಗೂ ಇತರರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ. 

ಇ.ಡಿ ವಿಚಾರಣೆ ಹಿನ್ನೆಲೆಯಲ್ಲಿ ಜಾಕ್ವೆಲಿನ್, ಅನೂಪ್‌ ಭಂಡಾರಿ ನಿರ್ದೇಶನದ ,ನಟ ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ಪ್ರಚಾರದಿಂದ ದೂರ ಉಳಿದಿದ್ದಾರೆ. 

ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಜಾಕ್ವೆಲಿನ್ ಭಾಗವಹಿಸಿದ್ದರು. ಸದ್ಯ ಇ.ಡಿ. ವಿಚಾರಣೆ ಎದುರಿಸುತ್ತಿರುವುದರಿಂದ ಸಿನಿಮಾ ಪ್ರಚಾರಕ್ಕೆ ಬಂದಿಲ್ಲ ಎಂದು ಚಿತ್ರತಂಡ ತಿಳಿಸಿದೆ.
 
ಇತ್ತೀಚಿಗಷ್ಟೇ ಬಿಡುಗಡೆಯಾದ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಮೂಡಿಬಂದಿರುವ ಟ್ರೇಲರ್‌ನಲ್ಲಿ ಹಲವು ಕುತೂಹಲಕಾರಿ ಅಂಶಗಳು ಗಮನ ಸೆಳೆದಿವೆ. ಈ ಚಿತ್ರ ಜುಲೈ 28ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. 

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾಕ್ವೆಲಿನ್ ಅವರನ್ನು ಈಗಾಗಲೇ 2-3 ಬಾರಿ ವಿಚಾರಣೆ ನಡೆಸಿದ್ದ ಇ.ಡಿ, ಹಣ  ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಅವರ ₹7.27 ಕೋಟಿ ಮೌಲ್ಯದ ನಗದನ್ನು ತಾತ್ಕಾಲಿಕವಾಗಿ ವಶಕ್ಕೆ ಪಡೆದಿದೆ. 

ಇವನ್ನೂ ಓದಿ...

51ನೇ ವಯಸ್ಸಿಗೆ ಗಂಡು ಮಗುವಿಗೆ ತಂದೆಯಾದ ತೆಲುಗು ನಿರ್ಮಾಪಕ ದಿಲ್‌ರಾಜು

ಶ್ವಾಸಕೋಶ ಸೋಂಕು: ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ  

ಹಾಟ್ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ: ಎದೆಬಡಿತ ಹೆಚ್ಚಿಸಿದ ‘ನ್ಯಾಷನಲ್‌ ಕ್ರಶ್’

ಮೈಕ್ರೊಸಾಫ್ಟ್‌ ರೂವಾರಿ ಬಿಲ್‌ ಗೇಟ್ಸ್‌ ಭೇಟಿಯಾದ ನಟ ಮಹೇಶ್ ಬಾಬು –ನಮ್ರತಾ ದಂಪತಿ

ಸಾಂಪ್ರದಾಯಿಕ ಕೆಂಪು ಸೀರೆಯಲ್ಲಿ ಮೋಡಿ ಮಾಡಿದ ನಟಿ ರಾಕುಲ್ ಪ್ರೀತ್ ಸಿಂಗ್ 

ಪ್ರವಾಹ ಪೀಡಿತ ಅಸ್ಸಾಂಗೆ ₹25 ಲಕ್ಷ ನೆರವು ನೀಡಿದ ಅಮೀರ್ ಖಾನ್: ಸಿಎಂ ಕೃತಜ್ಞತೆ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು