ಮುಂಬೈ: ಬಾಲಿವುಡ್ ನಟಿ ಮೌನಿರಾಯ್ ಪತಿಯಿಂದ ದೂರವಾಗಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ನಟಿ, ‘ಇಬ್ಬರೂ ಒಪ್ಪಿಕೊಂಡೇ ವಿಚ್ಛೇದನ ಪಡೆಯುತ್ತಿದ್ದೇವೆ’ ಎಂದಿದ್ದಾರೆ.

ಮೌನಿ ರಾಯ್ ಅವರು 4 ವರ್ಷಗಳ ಹಿಂದೆ ಸೂರಜ್ ನಂಬಿಯಾರ್ ಅವರೊಂದಿಗೆ ವಿವಾಹವಾಗಿದ್ದರು.

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ನಟಿ, ‘ವೈಯಕ್ತಿಕ ಆದ್ಯತೆಗಳನ್ನು ಪರಿಗಣಿಸುವ ನಿಟ್ಟಿನಲ್ಲಿ ಇಬ್ಬರೂ ಪರಸ್ಪರ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ಈ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಿ, ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡದಿರಿ’ ಎಂದಿದ್ದಾರೆ.

2022ರಲ್ಲಿ ಗೋವಾದಲ್ಲಿ ಅದ್ದೂರಿಯಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಂಡಿದ್ದ ಈ ಜೋಡಿ ಬಂಗಾಳಿ ಮತ್ತು ಮಲಯಾಳಿ ಎರಡೂ ಸಂಸ್ಕೃತಿಯ ಸಂಪ್ರದಾಯವನ್ನೂ ಪಾಲಿಸಿದ್ದರು. ಮೌನಿ ಮತ್ತು ಸೂರಜ್ ಮದುವೆಗೆ ಅನೇಕ ಸಿನಿತಾರೆಯರು ಭಾಗಿಯಾಗಿ ಶುಭಹಾರೈಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.