ಗುರುವಾರ , ಮಾರ್ಚ್ 23, 2023
21 °C

ದೀಪದ ಬೆಳಕಿನಲ್ಲಿ ಕಂಗೊಳಿಸಿದ ಕೆಜಿಎಫ್ ಬೆಡಗಿ ಮೌನಿ ರಾಯ್

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಿರುತೆರೆ ಹಾಗೂ ಬಾಲಿವುಡ್ ಸ್ಟಾರ್ ಮೌನಿ ರಾಯ್ ಈ ಸಾರಿಯ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ಸಾಂಪ್ರದಾಯಿಕ ಕೆಂಪು ಉಡುಗೆಯಲ್ಲಿ ದೀಪ ಹಚ್ಚಿ ದೀಪಾವಳಿ ಆಚರಿಸಿರುವ ಮೌನಿ ರಾಯ್ ಫೋಟೊಗಳು ಇಂಟರ್‌ನೆಟ್‌ನಲ್ಲಿ ಗಮನ ಸೆಳೆದಿವೆ.

ಇನ್‌ಸ್ಟಾಗ್ರಾಂನಲ್ಲಿ ಎಲ್ಲರಿಗೂ ದೀಪಾವಳಿ ಶುಭಾಶಯ ಕೋರಿದ್ದ ಮೌನಿ ರಾಯ್, ದೀಪದ ಬೆಳಕಿನಲ್ಲಿ ಆಕರ್ಷಕವಾಗಿ ಕಂಗೊಳಿಸಿದ್ದಾರೆ. ಅವರು ಬರುವ ವರ್ಷ ಜನವರಿಯಲ್ಲಿ ಮದುವೆ ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ ಅವರನ್ನು ಮೌನಿ ರಾಯ್ ವರಿಸಲಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಮೌನಿ ಸಹೋದರ ವಿದ್ಯುತ್ ರಾಯ್ ಸರ್ಕಾರ್, ಪತ್ರಿಕಾ ಸಂದರ್ಶನವೊಂದರಲ್ಲಿ ಹೇಳಿದ್ದರು. ಆದರೆ, ಮೌನಿ ಮಾತ್ರ ಈ ವಿಚಾರದಲ್ಲಿ ಮೌನ ಮುರಿದಿಲ್ಲ.

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ದುಬೈನಲ್ಲಿಯೇ ಇದ್ದ ಮೌನಿ, ಸೂರಜ್ ಜೊತೆ ಓಡಾಡಿಕೊಂಡಿದ್ದರು. ಸೂರಜ್‌ರನ್ನು ಮೌನಿ ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದಾರೆ.

ಮೌನಿ ರಾಯ್ ಕೆಜಿಎಫ್ ಚಾಪ್ಟರ್1ರ ಹಿಂದಿ ಆವೃತ್ತಿಯಲ್ಲಿ 'ಗಲೀ ಗಲೀ' ಐಟಂ ನೃತ್ಯದಲ್ಲಿ ಕಾಣಿಸಿಕೊಂಡಿದ್ದರು. ಇದು ಬಾಲಿವುಡ್‌ನಲ್ಲಿ ಅವರಿಗೆ ದೊಡ್ಡ ಹೆಸರು ತಂದು ಕೊಟ್ಟಿತ್ತು.

ಅಂದಹಾಗೇ ಮೌನಿ ರಾಯ್‌ಗೆ ಇನ್‌ಸ್ಟಾಗ್ರಾಂನಲ್ಲಿ 20 ಮಿಲಿಯನ್ (2 ಕೋಟಿ) ಫಾಲೋವರ್ಸ್ ಇದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‘ ಸಿನಿಮಾ ವಿವಾದದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು