ಗುರುವಾರ , ಅಕ್ಟೋಬರ್ 6, 2022
27 °C

ನಿರ್ದೇಶಕ ಮಂಸೋರೆ ಮದುವೆ ಫಿಕ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿವು, ನಾತಿಚರಾಮಿ ಮತ್ತು ಆಕ್ಟ್-1978 ಚಿತ್ರಗಳ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ 'ಮಂಸೋರೆ' ಅವರು ಇಂದು ಬೆಂಗಳೂರಿನಲ್ಲಿ ಅಖಿಲಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡರು. ಕುಟುಂಬದವರು ಹಾಗೂ ಕೆಲವು ಗೆಳೆಯರ ಸಮಕ್ಷಮದಲ್ಲಿ ನಿಶ್ಚಿತಾರ್ಥ ನಡೆದಿದೆ. ಮದುವೆ ಆಗಸ್ಟ್ 15ರಂದು ನಿಗದಿ ಆಗಿದೆ.

2014ರಲ್ಲಿ ಮಂಸೋರೆ ಅವರು ಮೊದಲು ನಿರ್ದೇಶಿಸಿದ ‘ಹರಿವು’ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ಹರಿವು ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ಮಂಸೋರೆ ನಿರ್ದೇಶನದಲ್ಲಿ, ಶೃತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿ, 2018ರಲ್ಲಿ ಬಿಡುಗಡೆಯಾಗಿದ್ದ ‘ನಾತಿಚರಾಮಿ’ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ ಮತ್ತು ಇತರ ಮೂರು ವಿಭಾಗಗಳಲ್ಲಿ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು, ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಗರಿ ಸಿಕ್ಕಿತ್ತು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ನೇತೃತ್ವದ, ‘ಬದಲಾದ ಭಾರತ’ ಎಂಬ ಯೋಜನೆಯಡಿಯಲ್ಲಿ ಆಯ್ಕೆಯಾದ ಸಿನಿಮಾಗಳ ಪಟ್ಟಿಯಲ್ಲಿ ‘ನಾತಿಚರಾಮಿ’ ಚಿತ್ರವೂ ಒಂದಾಗಿತ್ತು.

ಮಂಸೋರೆ ನಿರ್ದೇಶನದ ಮೂರನೇ ಚಲನಚಿತ್ರ ‘ಆಕ್ಟ್-1978’ ಕಳೆದ ವರ್ಷ ದೀರ್ಘಕಾಲದ ಲಾಕ್-ಡೌನ್ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮೊದಲ ದಕ್ಷಿಣ ಭಾರತದ ಚಲನಚಿತ್ರ ಎಂದೇ ಖ್ಯಾತಿಯಾಗಿತ್ತು. ಕೊರೋನಾ ಲಾಕ್-ಡೌನ್ ನಂತರ ಸಿನಿಮಾಗಳನ್ನು ಬಿಡುಗಡೆ ಮಾಡಲು ಚಿತ್ರರಂಗ ಹಿಂದೇಟು ಹಾಕುತ್ತಿದ್ದ ವೇಳೆಯಲ್ಲಿ ಬಿಡುಗಡೆಯಾದ ‘ಆಕ್ಟ್-1978’ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯಕ್ಕೆ ಮಂಸೋರೆ ಅವರು ‘ರಾಣಿ ಅಬ್ಬಕ್ಕ’ನ ಕುರಿತಾದ ಚಿತ್ರ ಮಾಡುವ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು