ಮಹಿಳಾ ಪ್ರಧಾನ ಕಥೆ ಹೊಂದಿರುವ ‘ಮೃತ್ಯುದೇವತೆ’ ಚಿತ್ರದ ‘ದೇವಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನವೀನ್ ಮಹದೇವ್ ನಿರ್ದೇಶನದ ಚಿತ್ರ ಸೆನ್ಸಾರ್ ಹಂತದಲ್ಲಿದೆ. ನಿರ್ದೇಶಕ ಓಂ ಸಾಯಿಪ್ರಕಾಶ್ ಚಿತ್ರದ ಹಾಡು ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ಸಮಾಜದಲ್ಲಿ ಪ್ರತಿನಿತ್ಯ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರ ಪ್ರಕರಣಗಳ ಕುರಿತಾದ ಕಥೆಯಿದು. ಹೀಗೆ ಸಂಕಷ್ಟಕ್ಕೆ ಸಿಲುಕಿದ ಮೂರು ಹೆಣ್ಣು ಮಕ್ಕಳು, ಹೇಗೆ ಕಷ್ಟದಿಂದ ಪಾರಾಗಿ ಬರುತ್ತಾರೆ ಎಂಬುದೇ ಚಿತ್ರಕಥೆ. ಹೆಣ್ಣುಮಕ್ಕಳು ಅದೆಷ್ಟೇ ಚತುರರಾಗಿದ್ದರೂ, ದುಷ್ಟರು ಅವರನ್ನು ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿಸುತ್ತಾರೆ, ಹೆಣ್ಣಿನ ಸಹನೆಯ ಕಟ್ಟೆ ಒಡೆದಾಗ ಏನಾಗುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ. ಸ್ವಲ್ಪ ಹಾರರ್ ಸ್ವರೂಪದಲ್ಲಿದೆ. ಮೇ.22ಕ್ಕೆ ಚಿತ್ರ ತೆರೆಗೆ ತರುವ ಆಲೋಚನೆಯಿದೆ’ ಎಂದರು ನಿರ್ದೇಶಕ.

ವಿನಯಾ ಪ್ರಕಾಶ್, ಹಿಮಶ್ರೀ, ಸಾರಿಕಾ ರಾವ್ ಹಾಗೂ ಡಯಾನಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ನವೀನ್ ಮಹದೇವ್ ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರ್ಷಿತಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸರಸ್ವತಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಅನಿರುದ್ಧ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಸಂಗೀತ ನಿರ್ದೇಶನ, ಮಂಜು ವಿಕ್ರಂ ಸಂಕಲನ ಚಿತ್ರಕ್ಕಿದೆ.v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-791039637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.