ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕ್ರಮ್‌ಗೆ ಜೋಡಿಯಾದ ಸಂಜನಾ

Published 28 ಮಾರ್ಚ್ 2024, 22:25 IST
Last Updated 28 ಮಾರ್ಚ್ 2024, 22:25 IST
ಅಕ್ಷರ ಗಾತ್ರ

‘ಕೆಮಿಸ್ಟ್ರಿ ಆಫ್‌ ಕರಿಯಪ್ಪ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ ನಟಿ ಸಂಜನಾ ಆನಂದ್‌, ಕ್ರೇಜಿಸ್ಟಾರ್‌ ಪುತ್ರ ವಿಕ್ರಮ್‌ ನಟನೆಯ ‘ಮುಧೋಳ’ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣಹಚ್ಚಲಿದ್ದಾರೆ. 

ಚಂದನವನ ಸೇರಿದಂತೆ ತೆಲುಗು ಚಿತ್ರರಂಗದಲ್ಲೂ ಸಕ್ರಿಯರಾಗಿರುವ ಸಂಜನಾ, ವಿಕ್ರಮ್‌ಗೆ ಜೋಡಿಯಾಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಇದೀಗ ಚಿತ್ರತಂಡವೇ ಇದನ್ನು ಘೋಷಿಸಿದೆ. ದಿನಕರ್ ತೂಗುದೀಪ ನಿರ್ದೇಶನದ ‘ರಾಯಲ್’ ಹಾಗೂ ತೆಲುಗಿನ ‘ಫುಲ್ ಬಾಟಲ್’ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿರುವ ಸಂಜನಾ ಇತ್ತೀಚೆಗಷ್ಟೇ ಧನ್ವೀರ್‌ ನಟನೆಯ ‘ಹಯಗ್ರೀವ’ ಸಿನಿಮಾ ಒಪ್ಪಿಕೊಂಡಿದ್ದರು. 

‘ತ್ರಿವಿಕ್ರಮ್’ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ವಿಕ್ರಮ್‌ ಅವರ ಎರಡನೇ ಪ್ರಾಜೆಕ್ಟ್‌ ‘ಮುಧೋಳ’. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್‌ ರಾಜನ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT