ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿಗೆ ಹಾರಿ ಆತ್ಮಹತ್ಯೆ ಯತ್ನ: ರಂಪಾಟ

Last Updated 28 ಮಾರ್ಚ್ 2018, 7:56 IST
ಅಕ್ಷರ ಗಾತ್ರ

ಕಾರವಾರ: ಇಲ್ಲಿ ಕಾಳಿನದಿಗೆ ತನ್ನ ಒಂದು ಮಗುವನ್ನು ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ನ, ಗಾರೆ ಕೆಲಸಗಾರ ಶಂಕರ ಬಂಜಾರ (40) ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ರಾತ್ರಿ ಮಗುವಿನೊಂದಿಗೆ ನದಿಗೆ ಹಾರಿದ್ದ ಅವರನ್ನು ಹಾಗೂ ಮಗುವನ್ನು ದೇವಭಾಗ್ ಬೀಚ್ ರೆಸಾರ್ಟ್ ಸಿಬ್ಬಂದಿ ರಕ್ಷಿಸಿ, ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ವಿವಸ್ತ್ರನಾಗಿ ತಪ್ಪಿಸಿಕೊಂಡು ಬಂದು ಪುನಃ ನದಿಗೆ ಹಾರಿದರು. ನಂತರ ಈಜಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯ ಕಂಬದ ಕಟ್ಟೆಯಲ್ಲಿ ಕುಳಿತುಕೊಂಡರು. ಸ್ಥಳೀಯರು ಎಷ್ಟೇ ಕೂಗಿ ಕರೆದರೂ ವಾಪಸ್ ಬರಲು ಒಪ್ಪದೇ, ಗುಪ್ತಾಂಗಕ್ಕೆ ದಾರ ಬಿಗಿದುಕೊಂಡು ಮತ್ತೆ ನದಿಗೆ ಹಾರಲು ಮುಂದಾದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಕೊನೆಗೆ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ದೋಣಿಯ ಮೂಲಕ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಮಗುವಿಗೆ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರವಾರ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT