ಶುಕ್ರವಾರ, ಡಿಸೆಂಬರ್ 4, 2020
22 °C

‘ಮುಖವಾಡ ಇಲ್ಲದವನು 84’ ಟ್ರೈಲರ್ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶೀರ್ಷಿಕೆ ಮೂಲಕವೇ ಕುತೂಹಲ ಹುಟ್ಟಿಸಿರುವ ‘ಮುಖವಾಡ ಇಲ್ಲದವನು 84’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೊದಲ್ಲಿ ನೆರವೇರಿತು. ಓಂ ನಮಃ ಶಿವಾಯ ಮೂವೀಸ್ ಲಾಂಛನದಲ್ಲಿ ಗಣಪತಿ ಪಾಟೀಲ್ ಬೆಳಗಾವಿ ನಿರ್ಮಾಣದ ಈ ಚಿತ್ರವು ಹೊಸಬರ ಪ್ರಯತ್ನವಾಗಿದೆ. ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ರವಿ ಶ್ರೀವತ್ಸ ಹಾಗೂ ವೇಣುಗೋಪಾಲ್ ಅತಿಥಿಗಳಾಗಿದ್ದರು.

ನ್ಯೂಜಿಲೆಂಡ್‌ನಲ್ಲಿ ಉದ್ಯೋಗಿಯಾಗಿರುವ ಗಣಪತಿ ಪಾಟೀಲ್ ಬಹಳ ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಹಂಬಲ ಹೊಂದಿದ್ದವರು. ಚಿತ್ರದ ಬಹುತೇಕ ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು ಬಿಡುಗಡೆಯ ಸಿದ್ಧತೆ ಮಾಡಿಕೊಳ್ಳುತ್ತಿದೆ ತಂಡ.

ಶಿವಕುಮಾರ್ ಕಡೂರು ನಿರ್ದೇಶನದ ಜೊತೆಗೆ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಮೊದಲು ‘ಡ್ರೆಸ್ ಕೋಡ್’ ಚಿತ್ರ ಮಾಡಿದ ಅನುಭವ ಇವರಿಗಿದೆ. 

‘ನಾಲ್ಕು ವರ್ಷ ಸಾಧುಗಳ ಸಂಗ ಮಾಡಿ ಅಧ್ಯಾತ್ಮ, ವೈರಾಗ್ಯದ ಮೊರೆ ಹೋಗಿದ್ದೆ. ಆ ವೇಳೆಯಲ್ಲಿ ಮುಖವಾಡ ಇಲ್ಲದವನು ಎಂಬ ಪುಸ್ತಕವನ್ನೂ ಬರೆದಿದ್ದೆ. ಸಾಧು ಸಂತರಿಂದ ಕಲಿತದ್ದನ್ನೇ ಇದೀಗ ಸಿನಿಮಾ ಮಾಡಿದ್ದೇನೆ. ಸುವರ್ಣಮುಖಿ, ಬನ್ನೇರುಘಟ್ಟ, ಚಿಕ್ಕಮಗಳೂರು, ಬೆಳಗಾವಿ, ಅಂಬೂಲಿ ಸೇರಿ ಹಲವೆಡೆ ಚಿತ್ರೀಕರಣ ಮಾಡಿದ್ದೇವೆ’ ಎಂದು ಸಿನಿಮಾ ಕುರಿತ ಮಾತನಾಡಿದ್ದಾರೆ ನಿರ್ದಶಕ ಶಿವಕುಮಾರ್‌.

ಕಾವ್ಯಾ ಗೌಡ, ರಚನಾ, ಸೊನಾಲಿ ರಾಯ್ ಮತ್ತು ಹರೀಶ್ ಸಾರಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ದುರ್ಗಾ ಪ್ರಸಾದ್ ಅವರ ಸಂಗೀತ ಹಾಗೂ ಡಾ. ಮಹಾರಾಜಾ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೆನ್ಸಾರ್ ಮಂಡಳಿಯಿಂದ ಯುಎ ಪ್ರಮಾಣಪತ್ರ ಪಡೆದುಕೊಂಡಿರುವ ಸಿನಿಮಾವನ್ನು ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು