ಬೆಂಗಳೂರು: ನಗರದ ಮಲ್ಟಿಪ್ಲೆಕ್ಸ್ ಹಾಗೂ ಕೆಲ ಚಿತ್ರಮಂದಿರಗಳಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ಪ್ರಸಾರ ನಿಷೇಧಿಸಬೇಕೆಂದು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಬುಧವಾರ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.

‘ಸೆನ್ಸಾರ್ ಇಲ್ಲದಿರುವ ವಿಷಯಗಳನ್ನು ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ಗಳು ಪ್ರಸಾರ ಮಾಡುವಂತಿಲ್ಲ. ಆದರೆ ಇವು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕ್ರಿಕೆಟ್ ಪ್ರದರ್ಶನಕ್ಕೆ ಮುಂದಾಗಿವೆ. ಇದರಿಂದಾಗಿ ಬಿಡುಗಡೆಗೆ ಸಿದ್ಧವಾಗಿರುವ ಕನ್ನಡ ಚಿತ್ರಗಳ ನಿರ್ಮಾಪಕರು ಸಂಕಷ್ಟ ಎದುರಿಸುವಂತಾಗಿದೆ. ಹೀಗಾಗಿ ಈ ಬಗ್ಗೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಸಲ್ಲಿಸಿದ್ದೇವೆ’ ಎಂದು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಿಳಿಸಿದರು.

‘ಈ ಪಂದ್ಯಗಳಿಂದ ಅಪಾರ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುವ ಆಪಾಯವು ಇದೆ. ಈಗಾಗಲೇ ಆನ್ಲೈನ್ ಬೆಟ್ಟಿಂಗ್ ಮೂಲಕ ಹಣ ಕಳೆದುಕೊಂಡ ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸಂಬಂಧಿಸಿದವರ ಗಮನಕ್ಕೆ ತರಲಾಗಿದೆ. ರಾಜ್ಯದ ಎಲ್ಲಾ ಚಿತ್ರಮಂದಿರಗಳಿಗೂ ಕ್ರಿಕೆಟ್ ಪಂದ್ಯಗಳನ್ನು ಪ್ರಸಾರ ಮಾಡದಂತೆ ನಿರ್ದೇಶನ ನೀಡಲು ಕೋರಿದ್ದೇವೆ’ ಎಂದು ಬಣಕಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.