ಭಾನುವಾರ, ಮೇ 16, 2021
22 °C
ಕೋಮು ದ್ವೇಷ ಹರಡುತ್ತಿರುವ ಆರೋಪ

‌ಕಂಗನಾ ರನೌತ್, ಅವರ ಸಹೋದರಿ ವಿರುದ್ಧ ಎಫ್‌ಐಆರ್‌ಗೆ ಮುಂಬೈ ಕೋರ್ಟ್ ಸೂಚನೆ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೋಮು ದ್ವೇಷ ಹರಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲು ಬಾಂದ್ರಾದ ನ್ಯಾಯಾಲಯ ಸೂಚಿಸಿದೆ.

ಶಾಹಿಲ್ ಅಶ್ರಫಾಲಿ ಸಯ್ಯದ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ನ್ಯಾಯಾಲಯ ಈ ಸೂಚನೆ ನೀಡಿದೆ. ಕಂಗನಾ ಮತ್ತು ಅವರ ಸಹೋದರಿ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ಪ್ರಕಟಿಸುವ ಮೂಲಕ ಹಿಂದೂ ಮತ್ತು ಮುಸ್ಲಿಮರ ನಡುವೆ ಕೋಮು ದ್ವೇಷ ಹರಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಟಿ ಕಂಗನಾ ರನೌತ್ ವಿರುದ್ಧ ತುಮಕೂರಲ್ಲಿ ಎಫ್‌ಐಆರ್

ದೂರು ಹಾಗೂ ದೂರಿನ ಜತೆ ಸಲ್ಲಿಸಿದ ದಾಖಲೆಗಳ ಪ್ರಾಥಮಿಕ ಪರಿಶೀಲನೆ ನಡೆಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರು ಆರೋಪಿಗಳು ತಪ್ಪೆಸಗಿರುವ ಸಾಧ್ಯತೆ ಇರುವುದನ್ನು ಮನಗಂಡಿದ್ದು, ಎಫ್ಐಆರ್ ದಾಖಲಿಸಲು ಸೂಚಿಸಿದ್ದಾರೆ.

ಅಪರಾಧ ದಂಡಸಂಹಿತೆಯ ಸೆಕ್‌ಷನ್ 156(3) ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ತನಿಖೆ ನಡೆಸುಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು