ಮುಂಬೈ: ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ 354 ಎ(ಲೈಂಗಿಕ ಕಿರುಕುಳ), 354 ಡಿ(ಹಿಂಬಾಲಿಸುವಿಕೆ), 509, 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಐಪಿಸಿ ಮತ್ತು ಐಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನವೀನ್ ವಾಟ್ಸ್‌ಆ್ಯಪ್ ಮೂಲಕ ಸೆಲೆಬ್ರಿಟಿಗಳು ಸೇರಿದಂತೆ ಪ್ರಭಾವಿಗಳಿಗೆ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.