ಮಂಗಳವಾರ, ಡಿಸೆಂಬರ್ 7, 2021
22 °C

ಡ್ರಗ್ಸ್‌ ಪ್ರಕರಣ: ನಟ ಶಾರುಕ್‌ ನಿವಾಸದಲ್ಲಿ ಎನ್‌ಸಿಬಿ ತಂಡದಿಂದ ಪರಿಶೀಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟ ಶಾರುಕ್‌ ಖಾನ್‌ ನಿವಾಸದಲ್ಲಿ ಎನ್‌ಸಿಬಿ ತಂಡದ ಅಧಿಕಾರಿಗಳು ಗುರುವಾರ ಪರಿಶೀಲನೆ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.

ಡ್ರಗ್ಸ್‌ ಪ್ರಕರಣದ ಸಂಬಂಧ ಜೈಲಿನಲ್ಲಿರುವ ಪುತ್ರ ಆರ್ಯನ್‌ನನ್ನು ಶಾರುಕ್‌ ಖಾನ್‌ ಇಂದು (ಗುರುವಾರ) ಭೇಟಿಯಾದರು. ಇದಾದ ಕೆಲ ಕ್ಷಣಗಳಲ್ಲೇ ಶಾರುಕ್‌ ಅವರ ನಿವಾಸ 'ಮನ್ನತ್‌'ನಲ್ಲಿ ಎನ್‌ಸಿಬಿ ತಂಡದ ಅಧಿಕಾರಿಗಳು ಕಾಣಿಸಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಮತ್ತೊಬ್ಬ ಬಾಲಿವುಡ್‌ ನಟ ಚಂಕಿ ಪಾಂಡೆ ಅವರ ನಿವಾಸಕ್ಕೂ ಎನ್‌ಸಿಬಿ ತಂಡ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚಂಕಿ ಪಾಂಡೆ ಮಗಳು ಅನನ್ಯಾ ಪಾಂಡೆ ಅವರು ಎನ್‌ಸಿಬಿ ವಿಚಾರಣೆಗೆ ಇಂದು ಹಾಜರಾಗಲಿದ್ದಾರೆ.

ಇದನ್ನೂ ಓದಿ- ಡ್ರಗ್ಸ್ ಪ್ರಕರಣ: ಆರ್ಯನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಆರ್ಯನ್ ಖಾನ್ ಅಕ್ಟೋಬರ್ 2ರಿಂದ ಜೈಲಿನಲ್ಲಿದ್ದಾರೆ.

ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು