ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಮಿಳಿನ ಸಂಗೀತ ನಿರ್ದೇಶಕ ’‌ಇಮ್ಮಾನ್‌’ ಎರಡನೇ ಮದುವೆಗೆ ಸಿದ್ಧತೆ

Published : 8 ಮಾರ್ಚ್ 2022, 11:00 IST
ಫಾಲೋ ಮಾಡಿ
Comments

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಡಿ. ಇಮ್ಮಾನ್‌ ಅವರು ಎರಡನೇ ಮದುವೆಯಾಗುತ್ತಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಡಿಸೆಂಬರ್‌ನಲ್ಲಿ ಮೊದಲ ಪತ್ನಿ ಮೋನಿಕಾ ಅವರಿಗೆ ವಿಚ್ಛೇದನ ನೀಡಿದ್ದರು. ವೃತ್ತಿಯಲ್ಲಿ ಎಂಜಿನಿಯರ್‌ ಆಗಿರುವ ಮೋನಿಕಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ವಿಚ್ಛೇದನ ನೀಡಿ 3 ಮೂರು ತಿಂಗಳಲ್ಲಿ ಎರಡನೇ ಮದುವೆಗೆ ಇಮ್ಮಾನ್‌ ಸಿದ್ದತೆ ಮಾಡಿಕೊಂಡಿದ್ದು ಮಾರ್ಚ್‌ ತಿಂಗಳ ಕೊನೆಯ ವಾರದಲ್ಲಿ ಸರಳವಾಗಿ ಮದುವೆಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಮ್ಮಾನ್‌ ಅವರು ಚೆನ್ನೈ ಮೂಲದ ’ಉಮಾ’ ಎಂಬುವರನ್ನು ಮದುವೆಯಾಗಲಿದ್ದಾರೆ ಎಂದು ಅವರ ಕುಟುಂಬದ ಆಪ್ತರು ಖಚಿತಪಡಿಸಿದ್ದಾರೆ.

ಈ ಬಗ್ಗೆ ಇಮ್ಮಾನ್‌ ಅವರು ಇಲ್ಲಿಯವರೆಗೂ ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ. ಇಮ್ಮಾನ್‌ ಅವರು ತಮಿಳು, ತೆಲುಗು, ಮಲಯಾಳಂನಲ್ಲಿ ಸುಮಾರು 100ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT