ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರವಿಕೆ ಪ್ರಸಂಗ’ಕ್ಕೆ ಗುರುಕಿರಣ್‌ ಬಲ

Published 19 ಡಿಸೆಂಬರ್ 2023, 10:56 IST
Last Updated 19 ಡಿಸೆಂಬರ್ 2023, 10:56 IST
ಅಕ್ಷರ ಗಾತ್ರ

‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್ ಮುಖ್ಯಭೂಮಿಕೆಯಲ್ಲಿರುವ ‘ರವಿಕೆ ಪ್ರಸಂಗ’ ಚಿತ್ರದ ಹಾಡೊಂದನ್ನು ಸಂಗೀತ ನಿರ್ದೇಶಕ ಗುರುಕಿರಣ್ ಇತ್ತೀಚೆಗೆ ಬಿಡುಗಡೆಗೊಳಿಸಿದರು. 

‘ಮನಸಲಿ ಜೋರು ಕಲರವ’ ಎಂಬ ಸುಮಧುರ ಗೀತೆಗೆ ಕಿರಣ್ ಕಾವೇರಪ್ಪ ಅವರ ಸಾಹಿತ್ಯ, ಮಾನಸ ಹೊಳ್ಳ ಅವರ ಧ್ವನಿ ಹಾಗೂ ವಿನಯ್ ಶರ್ಮಾ ಸಂಗೀತವಿದೆ.

ಸಂತೋಷ್ ಕೊಡಂಕೇರಿ ಅವರ ಚಿತ್ರಕಥೆ-ನಿರ್ದೇಶನದ ಚಿತ್ರವನ್ನು ದೃಷ್ಟಿ ಮಿಡಿಯಾ & ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ‘ಚಿತ್ರದ ಎಲ್ಲಾ ಕೆಲಸಗಳು ಮುಕ್ತಾಯವಾಗಿದ್ದು, ಶೀಘ್ರದಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಕೃಷ್ಣಮೂರ್ತಿ ಕವತಾರ್, ಪದ್ಮಜಾ ರಾವ್, ರಘು ಪಾಂಡೇಶ್ವರ್, ಪ್ರವೀಣ್ ಅಥರ್ವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT