‘ಮೈಸೂರು’ಹೆಸರಿನ ಚಿತ್ರವೊಂದು ತೆರೆಗೆ ಬರಲಿದೆ. ಅನಿವಾಸಿ ಕನ್ನಡಿಗನ ಪ್ರೇಮಕಥೆ ಆಧರಿಸಿದಸಂಗೀತಮಯ ಚಿತ್ರವಿದು. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಉಡುಪಿ, ಭುವನೇಶ್ವರ, ಪುರಿ, ಕಟಕ್ ಕಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ.

ವಾಸುದೇವ ರೆಡ್ಡಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅವರೇ ಎಸ್.ಆರ್. ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವನ್ನು ಮಾಡಿದ್ದಾರೆ. ಜಗದೀಶ್ (ಜೆ.ಕೆ), ಕೆ.ಆರ್.ಅಪ್ಪಾಜಿ (ಕೊಡವತ್ತಿ) ಈ ಚಿತ್ರದ ಸಹ ನಿರ್ಮಾಪಕರು.

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗುತ್ತಿದೆ.

ಸಂವಿತ್ ಈ ಚಿತ್ರದ ನಾಯಕ. ತೆಲುಗು, ಬಂಗಾಳಿ, ಭೋಜಪುರಿ ಚಿತ್ರಗಳಲ್ಲಿ ಅಭಿನಯಿಸಿರುವ ಇವರಿಗೆ ‘ಮೈಸೂರು’ ಕನ್ನಡದಲ್ಲಿ ಮೊದಲ ಚಿತ್ರ. ಪೂಜಾ ಈ ಚಿತ್ರದ ನಾಯಕಿ. ಜ್ಯೂ.ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ತಾರಾಬಳಗದಲ್ಲಿದ್ದಾರೆ.

ರಘು ಶಾಸ್ತ್ರಿ, ರವಿಶಂಕರ್ ನಾಗ್, ಅನಿತಾಕೃಷ್ಣ ಬರೆದಿರುವ ಹಾಡುಗಳಿಗೆ ರಮಣಿ ಸುಂದರೇಶನ್, ಅನಿತಕೃಷ್ಣ, ವಿಜಯ್ ರಾಜ್ ಸಂಗೀತ ನೀಡಿದ್ದಾರೆ.

ಕೃಷ್ಣ ಮಳವಳ್ಳಿ ಸಂಭಾಷಣೆ ಬರೆದಿದ್ದಾರೆ. ಭಾಸ್ಕರ್ ವಿ. ರೆಡ್ಡಿ ಛಾಯಾಗ್ರಹಣ, ಸಿದ್ದು ಭಗತ್ ಸಂಕಲನ ಹಾಗೂ ಸ್ಟಾರ್ ನಾಗಿ, ಮೈಸೂರು ರಾಜು, ಸುಧಾಕರ್ ವಸಂತ್ ಅವರ ನೃತ್ಯ,ಶ್ರೀಕಾಂತ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.