ಮೈಸೂರು: ‘ಯಾವುದೇ ಕವಿ ಗೀತೆಗಳನ್ನು ಮನರಂಜನೆಗಾಗಿ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಬರೆಯುವುದಿಲ್ಲ. ಹಾಗೊಂದು ವೇಳೆ ಯಾರಾದರೂ ಮಾಡಿದಲ್ಲಿ ಅದು ಕಾಗದದ ಹೂವು ಆಗುತ್ತದೆಯೇ ಹೊರತು ಸಹಜ ಹೂವು ಆಗುವುದಿಲ್ಲ’ ಎಂದು ಕವಿ ಕಾ.ವೆಂ. ಶ್ರೀನಿವಾಸಮೂರ್ತಿ ಪ್ರತಿಪಾದಿಸಿದರು.

ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕ ಹಾಗೂ ಅನಂತೇಶ್ವರ ಟ್ರಸ್ಟ್ ಸಹಯೋಗದಲ್ಲಿ ಗುರುವಾರ ಪುರಭವನದಲ್ಲಿ ಹಮ್ಮಿಕೊಂಡಿದ್ದ ತಮ್ಮ ಸಾಹಿತ್ಯ ಮತ್ತು ಕಾವ್ಯಲೋಕವನ್ನು ಪರಿಚಯಿಸುವ ಗೀತ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸುಗಮ ಸಂಗೀತಕ್ಕೆ ಸಂಗೀತ ಮತ್ತು ಸಾಹಿತ್ಯ ಎರಡೂ ಮುಖ್ಯ. ಸಂಗೀತ ಮತ್ತು ಸಾಹಿತ್ಯ ಜೋಡೆತ್ತಿನ ಬಂಡಿ ಇದ್ದಂತೆ. ಈ ರೀತಿಯ ಕಾರ್ಯಕ್ರಮಗಳಿಂದ ಕವಿಯ ಗೀತೆಗಳ ಗಾಯನದ ಜೊತೆಗೆ ಅವರ ವಿಚಾರಧಾರೆಯೂ ಗೊತ್ತಾಗುತ್ತದೆ’ ಎಂದರು.

ಮನ ಮುಟ್ಟುವಂತೆ: ಅಧ್ಯಕ್ಷತೆ ವಹಿಸಿದ್ದ ಸುಗಮ ಸಂಗೀತ ಪರಿಷತ್ ಜಿಲ್ಲಾ ಅಧ್ಯಕ್ಷ ನಾಗರಾಜ್ ವಿ. ಬೈರಿ ಮಾತನಾಡಿ, ‘ಕಾ.ವೆಂ. ಶ್ರೀನಿವಾಸಮೂರ್ತಿ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರಮುಖ ಕವಿ ಹಾಗೂ ಲೇಖಕರು. ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು ಆಧುನಿಕ ಬದುಕಿನ ನೋವು, ಭಾವನೆ, ಮಾನವೀಯತೆ ಮತ್ತು ಸಾಮಾಜಿಕ ಮೌಲ್ಯಗಳನ್ನು ಕವನಗಳಲ್ಲಿ ಅತ್ಯಂತ ಸರಳ ಹಾಗೂ ಮನಮುಟ್ಟುವಂತೆ ಅಭಿವ್ಯಕ್ತಿಸಿದ್ದಾರೆ’ ಎಂದು ಶ್ಲಾಘಿಸಿದರು.

ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ, ಕವಿ ಜಯಪ್ಪ ಹೊನ್ನಾಳಿ ಮುಖ್ಯ ಅತಿಥಿಗಳಾಗಿದ್ದರು.

ಗಾಯಕಿ ಶ್ವೇತಾ ದಿನೇಶ್ ಸಾರಥ್ಯದಲ್ಲಿ ಸಿ.ಎಂ. ನರಸಿಂಹಮೂರ್ತಿ, ಎಸ್. ಎರ್ರಿಸ್ವಾಮಿ, ಎಚ್.ವಿ. ತಿರುಮಲೇಶ್, ನಿಂಗರಾಜು, ಗೀತಾಲಕ್ಷ್ಮೀ ಕಿಣಿ, ಸುಜಾತಾ ಜಯಕುಮಾರ್, ರೇಖಾ, ಪದ್ಮಾ ರಾವ್, ಜಾಯ್ಸ್ ಥಾಮಸ್, ಎಸ್. ಶ್ವೇತಾ ಹಾಗೂ ನೇತ್ರಾವತಿ ಕಾವ್ಯಗಾಯನ ನಡೆಸಿಕೊಟ್ಟರು.

ಆಕಾಶವಾಣಿಯ ಜಿ.ಎನ್. ಮಂಜುನಾಥ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-39-2104839424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.