ಮೈಸೂರು: ಪುತ್ತೂರು ಬ್ರದರ್ಸ್ ಎಂಟರ್ಟೇನ್ಮೆಂಟ್ ನಿರ್ಮಾಣದ ಕನ್ನಡ ಸಿನಿಮಾ ‘ಮಂಗಮಾಯ’ ಮೇ 15ರಂದು ಮೈಸೂರಿನ ವಿವಿಧ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ಎಂದು ನಿರ್ದೇಶಕ ಪ್ರಸಾದ್ ಪುತ್ತೂರು ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ‘ಕಡಿಮೆ ವೆಚ್ಚದ, ನೈಜ ಘಟನೆ ಆಧಾರಿತ ಸಿನೆಮಾ ಇದಾಗಿದ್ದು, 43 ದಿನಗಳಲ್ಲಿ ಚಿತ್ರೀಕರಣಗೊಂಡಿದೆ. ಒಂದೇ ದಿನ ನಡೆಯುವ ಘಟನೆಗಳ ಕಥಾಹಂದರ ಒಳಗೊಂಡ ಚಿತ್ರ ಇದಾಗಿದ್ದು, ಹಾಸ್ಯದೊಂದಿಗೆ ಉತ್ತಮ ಕಥೆ ಹೊಂದಿದೆ. ಹೊಸ ಕಲಾವಿದರೇ ಇರುವ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ’ ಎಂದರು.

ಪ್ರಸನ್ನ ಪುತ್ತೂರು, ಮೊಹಮ್ಮದ್ ಹನೀಫ್ ಹೂಟಗಳ್ಳಿ, ಮೊಹಮ್ಮದ್ ನವೀದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-39-2044757880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.