ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ನಾಡಗೀತೆ, ವಂದೇಮಾತರಂ ನುಡಿಸುವಿಕೆಯಲ್ಲಿ ಯಾವುದು ಮೊದಲು ಎಂಬ ಗೊಂದಲ ಉಂಟಾಯಿತು.

‘ವಂದೇ ಮಾತರಂ’ ನುಡಿಸಲಾಗುತ್ತಿದ್ದು ಎಲ್ಲರೂ ಎದ್ದು ನಿಲ್ಲುವಂತೆ, ಕಾರ್ಯಕ್ರಮ ನಿರ್ವಹಣೆ ಮಾಡುತ್ತಿದ್ದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿನಂತಿಸಿದರು. ಆಗ, ‘ಜಯ ಭಾರತ ಜನನಿಯ ತನುಜಾತೆ’ ಎಂದು ನಾಡಗೀತೆಯ ಒಂದೆರಡು ಚರಣ ತೂರಿಬಂತು. ತಕ್ಷಣ ಅದನ್ನು ಸ್ಥಗಿತಗೊಳಿಸಿ, ‘ವಂದೇ ಮಾತರಂ’ ಹಾಡಲಾಯಿತು.

ಕಾರ್ಯಕ್ರಮದ ಆರಂಭ ಮತ್ತು ಕೊನೆಯಲ್ಲಿ ‘ವಂದೇ ಮಾತರಂ’ ಪೂರ್ಣ ಗೀತೆ ಹಾಡಲಾಯಿತು.

ತಾರೆಯರ ಮೆರುಗು: ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಮಾಜಿ ಸಂಸದೆ, ನಟಿ ರಮ್ಯಾ, ನಟ ಡಾಲಿ ಧನಂಜಯ್, ನಟಿಯರಾದ ರಾಗಿಣಿ ದ್ವಿವೇದಿ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ನಟರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1669976954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.