ಡಾ.ಲೀಲಾ ಮೋಹನ್ ಪಿ.ವಿ.ಆರ್ ನಾಯಕನಾಗಿ ನಟಿಸಿರುವ ‘ನಾಯಿ ಇದೆ ಎಚ್ಚರಿಕೆ’ ಚಿತ್ರ ನ.28ರಂದು ತೆರೆಗೆ ಬರಲಿದೆ. ಕಲಿ ಗೌಡ ನಿರ್ದೇಶಿಸಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ.

‘ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾಯಿ ನಿಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದ್ದಾಗಷ್ಟೇ ಅಲ್ಲ, ಸತ್ತ ಮೇಲೂ ಅದರ ನಿಯತ್ತು ಕಡಿಮೆಯಾಗದು ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ’ ಎಂದರು ನಿರ್ದೇಶಕ.

ಚಿತ್ರಕ್ಕೆ ಲೀಲಾ ಮೋಹನ್ ಅವರೇ ಬಂಡವಾಳ ಹೂಡಿದ್ದಾರೆ. ‘ನಾನು ವೃತ್ತಿಯಲ್ಲೂ ವೈದ್ಯ, ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ. ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್, ಸೆಂಟಿಮೆಂಟ್ ಎಲ್ಲವೂ ಇರುವ ಚಿತ್ರ. ದಿವ್ಯಶ್ರೀ ಈ ಚಿತ್ರದ ನಾಯಕಿ. ಪ್ರಮೋದ್ ಶೆಟ್ಟಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎಂದರು ನಾಯಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.