ಕಡೆಗೂ ಬೇರೆ ಬೇರೆಯಾದ ನಾಗ ಚೈತನ್ಯ ಹಾಗೂ ಸಮಂತಾ: ಡಿವೋರ್ಸ್ ಘೋಷಣೆ

ಬೆಂಗಳೂರು: ತೆಲುಗು ಸಿನಿಮಾ ನಟ ನಾಗ ಚೈತನ್ಯ ಹಾಗೂ ಖ್ಯಾತ ನಟಿ ಸಮಂತಾ ನಡುವಿನ ದಾಂಪತ್ಯ ಮುರಿದು ಬಿದ್ದಿದೆ. ವಿಚ್ಛೇದನ ಪಡೆಯುದಾಗಿ ತಾರಾ ಜೋಡಿ ಶನಿವಾರ ಘೋಷಿಸಿದೆ.
ಸ್ವತಃ ಈ ವಿಷಯವನ್ನು ಇಂದು ಟ್ವಿಟರ್‌ನಲ್ಲಿ ಪ್ರಕಟಿಸಿರುವ ನಾಗ ಚೈತನ್ಯ, ‘ಹೆಚ್ಚು ಆಲೋಚನೆ ನಂತರ ಸಮಂತಾ ಮತ್ತು ನಾನು ನಮ್ಮ ಸ್ವಂತ ದಾರಿಯನ್ನು ಅನುಸರಿಸಲು ಹೆಜ್ಜೆ ಇಟ್ಟಿದ್ದೇವೆ. ಈ ಮೂಲಕ ಗಂಡ ಮತ್ತು ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ‘ ಎಂದು ಘೋಷಿಸಿದ್ದಾರೆ.
‘ಒಂದು ದಶಕದ ಈ ಸ್ನೇಹವನ್ನು ಅನುಭವಿಸಲು ನಾವು ಅದೃಷ್ಟಶಾಲಿಯಾಗಿದ್ದೇವು. ಅದು ನಮ್ಮ ಸಂಬಂಧದ ತಳಹದಿ. ಯಾವಾಗಲೂ ನಮ್ಮ ನಡುವೆ ಅದು ವಿಶೇಷ ಬಾಂಧವ್ಯವನ್ನು ಹೊಂದಿರುತ್ತದೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮ್ಮನ್ನು ಬೆಂಬಲಿಸಬೇಕು‘ ಎಂದು ನಾಗ ಚೈತನ್ಯ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಅಲ್ಲದೇ ನಮ್ಮ ಖಾಸಗಿತನ ಗೌರವಿಸಬೇಕು ಎಂದು ಅಭಿಮಾನಿಗಳಿಗೆ ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. 2017 ರಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಅದ್ಧೂರಿಯಾಗಿ ಮದುವೆಯಾಗಿದ್ದರು.
— chaitanya akkineni (@chay_akkineni) October 2, 2021
ಸಮಂತಾ ಕೂಡ ಇನ್‌ಸ್ಟಾಗ್ರಾಂನಲ್ಲಿ ನಾಗ ಚೈತನ್ಯ ಹಾಕಿರುವ ಪೋಸ್ಟ್‌ನ್ನೇ ಹಾಕಿ ವಿಚ್ಚೇದನವನ್ನು ಖಚಿತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಸಮಂತಾ ಹಾಗೂ ನಾಗಚೈತನ್ಯ ವಿಚ್ಚೇದನ ಪಡೆದುಕೊಳ್ಳಲಿದ್ದಾರೆ ಎಂಬ ವದಂತಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಜೋರಾಗಿ ನಡೆದಿತ್ತು.
ಇದನ್ನೂ ಓದಿ: ಗಾಸಿಪ್‌ಗಳಿಗೆ ನನ್ನ ಹೆಸರನ್ನು ಬಳಸಿಕೊಳ್ಳುವುದು ನೋವು ತಂದಿದೆ: ನಾಗ ಚೈತನ್ಯ ಬೇಸರ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.