ಸೋಮವಾರ, ಮಾರ್ಚ್ 27, 2023
29 °C

ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೌನ ಮುರಿದ ನಾಗ ಚೈತನ್ಯ: ಹೇಳಿದ್ದೇನು ಗೊತ್ತಾ?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ನಟ ಅಕ್ಕಿನೇನಿ ನಾಗ ಚೈತನ್ಯ ಅವರಿಂದ ನಟಿ ಸಮಂತಾ ರುತ್ ಪ್ರಭು ವಿಚ್ಛೇದನ ಪಡೆದ ಬಳಿಕ ಅವರು ಈ ವಿಚಾರದ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ. ಆದರೆ, ಇದೀಗ ತಮ್ಮ ವಿಚ್ಛೇದನ ಕುರಿತು ಮೌನ ಮುರಿದಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ಅವರು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು. ನಾಲ್ಕು ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಿದ ಈ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಬರೆದುಕೊಂಡಿದ್ದು, ಬಹಳ ಯೋಚಿಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿಕೊಂಡಿದ್ದರು.

ಈ ಬೆಳವಣಿಗೆ ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿತ್ತು. ಬಳಿಕ ಈ ಜೋಡಿ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಸಮಂತಾ ಹಲವೆಡೆ ಬ್ರೇಕಪ್ ಕುರಿತು ಮುಕ್ತವಾಗಿ ಮಾತನಾಡಿದ್ದರು. ಆದರೆ, ನಾಗ ಚೈತನ್ಯ ಸಾರ್ವಜನಿಕವಾಗಿ ಈ ವಿಚಾರದ ಕುರಿತು ಮಾತನಾಡಿರಲಿಲ್ಲ. ಇದೀಗ ಅವರ ಹೊಸ ಸಿನಿಮಾ ‘ಬಂಗಾರ್ರಾಜು’ ಬಿಡುಗಡೆಗೆ ಸಿದ್ಧವಾಗಿದ್ದು, ಸಂದರ್ಶನವೊಂದರಲ್ಲಿ ಸಿನಿಮಾ ಮತ್ತು ವೈಯಕ್ತಿಕ ಜೀವನದ ಕುರಿತು ಪ್ರತಿಕ್ರಿಯಿಸಿದ್ದಾರೆ.

‘ಆ ಕ್ಷಣದ ನಿರ್ಧಾರವನ್ನು ಇಬ್ಬರೂ ಸೇರಿ ತೆಗೆದುಕೊಂಡಿದ್ದು. ಸಮಂತಾ ಖುಷಿಯಾಗಿದ್ದರೆ ನನಗೂ ಖುಷಿ’ ಎಂದಿದ್ದಾರೆ. ಅಲ್ಲದೇ ಆ ಸಂದರ್ಭದಲ್ಲಿ ನಾವು ತೆಗೆದುಕೊಂಡ ಉತ್ತಮ ನಿರ್ಧಾರ ಅದಾಗಿತ್ತು ಎಂದೂ ನಾಗ ಚೈತನ್ಯ ಅಭಿಪ್ರಾಯಪಟ್ಟಿದ್ದಾರೆ.

ಕಲ್ಯಾಣ್ ಕೃಷ್ಣ ಕುರಸಲ ನಿರ್ದೇಶನದ ‘ಬಂಗಾರ್ರಾಜು’ ಚಿತ್ರದಲ್ಲಿ ನಾಗರ್ಜುನ ಕೂಡ ಕಾಣಿಸಿಕೊಂಡಿದ್ದು, ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಕೃತಿ ಶೆಟ್ಟಿ, ರಮ್ಯಾ ಕೃಷ್ಣ ಮೊದಲಾದವರು ಅಭಿನಯಿಸಿದ್ದಾರೆ.

ಸಂಕ್ರಾಂತಿ ಹಬ್ಬದಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು