ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾವತಾರಿಯಾದ ನಾಗೇಂದ್ರ ಪ್ರಸಾದ್‌

Published 26 ಮಾರ್ಚ್ 2024, 21:21 IST
Last Updated 26 ಮಾರ್ಚ್ 2024, 21:21 IST
ಅಕ್ಷರ ಗಾತ್ರ

ಚಿತ್ರ ಸಾಹಿತಿ, ನಟ, ನಿರ್ದೇಶಕ ನಾಗೇಂದ್ರ ಪ್ರಸಾದ್‌ ಈಗ ‘ಕೃಷ್ಣಾವತಾರ’ ತಾಳಿದ್ದಾರೆ. ಹಾಗಂತ ಇದು ದ್ವಾಪರ ಯುಗದ ಶ್ರೀಕೃಷ್ಣನ ಕಥೆಯಲ್ಲ. ಕಲಿಯುಗದಲ್ಲಿ ಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆ. ಈ ಚಿತ್ರದ ಶೀರ್ಷಿಕೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಮಾಯಾಬಜಾರ್ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ಗುರುಪ್ರಸಾದ್ ಕೆ. ಬಂಡವಾಳ ಹೂಡಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರು.

‘ಹದಿನೈದು ದಿನ ಈ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೆ. ಈ ಕಥೆಯ ಆರಂಭ, ಅಂತ್ಯ ಎರಡೂ ನನ್ನ ಪಾತ್ರದಿಂದಲೇ ಆಗುತ್ತದೆ. ಈ ಸಿನಿಮಾ ಮೂಲಕ ನಿರ್ದೇಶಕರು ಏನೋ ಒಂದು ಹೊಸದನ್ನು ಹೇಳಲು ಹೊರಟಿದ್ದಾರೆ’ ಎಂದರು ನಾಗೇಂದ್ರ ಪ್ರಸಾದ್‌.

ಈ ಚಿತ್ರಕ್ಕೆ ರಾಜ ಶಿವಶಂಕರ್ ಛಾಯಾಚಿತ್ರಗ್ರಹಣವಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಮುಂತಾದವರು ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT