ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ನಮ್ರತಾ ಗೌಡ ನಟಿಸಲಿದ್ದಾರೆ.

‘ನಾಗಿಣಿ’ ಧಾರಾವಾಹಿಯ ಮೂಲಕ ಖ್ಯಾತಿ ಪಡೆದ ನಮ್ರತಾ ಬಳಿಕ ‘ಬಿಗ್ಬಾಸ್’ ರಿಯಾಲಿಟಿ ಶೋದಲ್ಲಿ ಮಿಂಚಿದ್ದರು. ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟ ಮಿತ್ರ, ‘ರಂಗಿತರಂಗ’ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಅವರೂ ನಟಿಸುತ್ತಿದ್ದಾರೆ.

‘ಸಿನಿಮಾದಲ್ಲಿ ನಟಿಸುವಂತೆ ನನಗೆ ಅನೇಕ ಸ್ನೇಹಿತರು ಒತ್ತಾಯಿಸುತ್ತಿದ್ದರು. ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು ಹೇಳಿದ ಈ ಕಥೆ ಮನಸ್ಸಿಗೆ ಹತ್ತಿರವಾಯಿತು. ರೈತರ ಬದುಕು ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದೇನೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದ್ದು, ನೈಜತೆಗೆ ಹತ್ತಿರವಾಗಿರುವ ಕಥೆಯುಳ್ಳ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಖುಷಿಯಿದೆ’ ಎನ್ನುತ್ತಾರೆ ನಮ್ರತಾ ಗೌಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.