ತೆಲುಗು ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ತೆಲುಗಿನ ಸೂಪರ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರು ಇಲ್ಲಿನ ಕೇರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಲಕೃಷ್ಣ ಅವರು ಭುಜದ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಬಲ ಭುಜದ ಮಾಂಸಖಂಡಗಳಲ್ಲಿ ಸಮಸ್ಯೆ ಇರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಬಾಲಕೃಷ್ಣ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಗುರುವಾರ ಅಥವಾ ಶುಕ್ರವಾರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಚಿತ್ರೀಕರಣ ಸಮಯದಲ್ಲಿ ಅವರ ಭುಜಕ್ಕೆ ಪೆಟ್ಟಾಗಿತ್ತು. 6 ತಿಂಗಳಿಂದ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಬೇರೆ ಯಾವುದೇ ರೀತಿಯ ಸಮಸ್ಯೆಗಳು ಇಲ್ಲ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
ಬಾಲಕೃಷ್ಣ ಅಕ್ಟೋಬರ್ 30 ರಂದು ಬೆಂಗಳೂರಿಗೆ ಬಂದು ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿದ್ದರು. ನಂತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು.
Read: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ತಮಿಳು ನಟ ಶಿವಕಾರ್ತಿಕೇಯನ್
ಸದ್ಯ ಬಾಲಕೃಷ್ಣ ಅಭಿನಯದ ಅಖಂಡ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಖ್ಯಾತ ನಿರ್ದೇಶಕ ಬಾಯಿಪಾಟು ಸೀನು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ರವೀಂದ್ರ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ. ಪ್ರಜ್ಞ್ಯಾ ಜೈಸ್ವಾಲ್ ನಾಯಕಿಯಾದರೆ, ಶ್ರೀಕಾಂತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.
Read: ರಶ್ಮಿಕಾ ಅಭಿನಯದ ಹಿಂದಿ ಸಿನಿಮಾ ‘ಮಿಷನ್ ಮಜ್ನು’ 2022ರ ಮೇ 13ಕ್ಕೆ ತೆರೆಗೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.