ಮಂಗಳವಾರ, ಆಗಸ್ಟ್ 9, 2022
23 °C

ತೆಲುಗು ನಟ ಬಾಲಕೃಷ್ಣಗೆ ಎರಡನೇ ಸಲ ಕೋವಿಡ್‌: ಆತಂಕ ಪಡಬೇಡಿ ಎಂದ ನಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರಿಗೆ ಎರಡನೇ ಸಲ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಯಾವುದೇ ರೋಗಲಕ್ಷಣಗಳಿಲ್ಲ ಎಂದು ಅವರ ಆಪ್ತರು ತಿಳಿಸಿದ್ದಾರೆ. ಸದ್ಯ ಬಾಲಕೃಷ್ಣ ಪ್ರತ್ಯೇಕ ವಾಸದಲ್ಲಿದ್ದಾರೆ.  

ಕಳೆದ ಎರಡು ದಿನಗಳಿಂದ ಅವರನ್ನು ಭೇಟಿಯಾದ ಪ್ರತಿಯೊಬ್ಬರಿಗೂ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜತೆಗೆ ತಮ್ಮ ಆರೋಗ್ಯ ಉತ್ತಮವಾಗಿರುವುದರಿಂದ ಯಾರೂ ಆತಂಕ ಪಡಬೇಡಿ ಎಂದು ಬಾಲಕೃಷ್ಣ ಹೇಳಿದ್ದಾರೆ.

ಅವರು ಇತ್ತೀಚೆಗೆ ಇನ್ನು ಹೆಸರಿಡದ ‘ಎನ್‌ಬಿಕೆ 107‘ ಸಿನಿಮಾದ ಶೂಟಿಂಗ್‌ಗೆ ಸೇರಿಕೊಂಡಿದ್ದರು. ಅಲ್ಲಿಗೆ ಹೋದ ಮೇಲೆ ಅವರಿಗೆ ಕೋವಿಡ್‌ ಕಾಣಿಸಿಕೊಂಡಿದೆ. ಇದೇ ಚಿತ್ರದಲ್ಲಿ ನಟಿ ಶ್ರುತಿ ಹಾಸನ್‌ ಕೂಡು ನಟಿಸುತ್ತಿದ್ದು. ಶೂಟಿಂಗ್‌ನಲ್ಲಿ ಅವರು ಭಾಗವಹಿಸಿದ್ದರು. ಇದೀಗ ಅವರಿಗೂ ಕೋವಿಡ್‌ ಆತಂಕ ಎದುರಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು