ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿಯಲ್ಲಿ ಬರ್ತಾರೆ ‘ನ್ಯಾನೋ ನಾರಾಯಣಪ್ಪ’!

Last Updated 29 ಡಿಸೆಂಬರ್ 2022, 16:31 IST
ಅಕ್ಷರ ಗಾತ್ರ

‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿದವರು ನಿರ್ದೇಶಕ ಕುಮಾರ್. ಇವರ ನಿರ್ದೇಶನದ ಮತ್ತೊಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.

‘ಕೆ.ಜಿ.ಎಫ್‌ ತಾತ’ ಖ್ಯಾತಿಯ ನಟ, ದಿವಂಗತ ಕೃಷ್ಣೋಜಿ ರಾವ್‌ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ನ್ಯಾನೋ ನಾರಾಯಣಪ್ಪ’ ಫೆಬ್ರುವರಿಯಲ್ಲಿ ಬಿಡುಗಡೆಯಾಗಲಿದೆ ಎಂದಿದೆ ಚಿತ್ರತಂಡ. ‘ಕೃಷ್ಣೋಜಿ ರಾವ್‌ ಬಹಳ ಲವಲವಿಕೆ
ಯಿಂದ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಚಿತ್ರದಲ್ಲಿ ಅವರ ನಟನೆ ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕೇಳುತ್ತಲೇ ಇದ್ದರು. ಆದರೆ ಇಂದು ಅವರು ನಮ್ಮೊಂದಿಗಿಲ್ಲ’ ಎಂದು ಕುಮಾರ್ ಬೇಸರ ವ್ಯಕ್ತಪಡಿಸುತ್ತಾರೆ.

ಸೆನ್ಸಾರ್‌ನಲ್ಲಿ ಸಿನಿಮಾ ‘ಯು’ ಪ್ರಮಾಣಪತ್ರ ಪಡೆದಿದೆ. ಕುಮಾರ್‌ ಅವರ ಎಲ್ಲ ಚಿತ್ರಗಳಂತೆ ಹಾಸ್ಯಕ್ಕೆ ಇಲ್ಲಿ ಮೊದಲ ಆದ್ಯತೆ ಇದೆ ಎಂದಿದೆ ಚಿತ್ರತಂಡ. ಜೊತೆಗೆ ಭಾವನಾತ್ಮಕ ಅಂಶಗಳೂ ಈ ಚಿತ್ರದಲ್ಲಿದೆಯಂತೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT