ನವದೆಹಲಿ: ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, 'ಹಲವು ತಲೆಮಾರುಗಳಲ್ಲಿ ಜನಪ್ರಿಯರಾಗಿರುವ, ತಮ್ಮ ಕೆಲಸದ ಬಗ್ಗೆ ಹೆಮ್ಮೆಪಡುವಂತೆ ಮಾಡಿರುವ, ವೈವಿಧ್ಯಮಯ ಪಾತ್ರ ಮತ್ತು ಪ್ರೀತಿಯ ವ್ಯಕ್ತಿತ್ವ ಹೊಂದಿರುವ ನಟ ರಜನಿಕಾಂತ್. ಥಲೈವಾ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿರುವುದು ಅಪಾರ ಸಂತಸ ತರುವ ಸಂಗತಿಯಾಗಿದೆ. ಅವರಿಗೆ ನನ್ನ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.

ಮೋದಿಯವರಿಗೆ ಟ್ವೀಟ್ ಮೂಲಕವೇ ಧನ್ಯವಾದ ತಿಳಿಸಿರುವ ರಜನಿಕಾಂತ್, 'ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆಯುವುದಕ್ಕೆ ಕಾರಣರಾಗಿರುವ ನಿಮಗೆ ಮತ್ತು ಭಾರತದ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು' ಎಂದಿದ್ದಾರೆ.

ನಟ ರಜನಿಕಾಂತ್ ಅವರಿಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಪ್ರಕಟಿಸಿದ್ದರು.

ತಮಿಳು ಚಿತ್ರರಂಗದಲ್ಲಿ ಖ್ಯಾತ ನಟ ದಿವಂಗತ ಶಿವಾಜಿ ಗಣೇಶನ್ ಮತ್ತು ಖ್ಯಾತ ಸಿನಿಮಾ ನಿರ್ದೇಶಕ ದಿವಂಗತ ಕೆ. ಬಾಲಚಂದರ್ ಅವರು ಫಾಲ್ಕೆ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬಾಲಚಂದರ್ ಅವರ ಮಾರ್ಗದರ್ಶನದಲ್ಲೇ ಬೆಳೆದು ಬಂದ ನಟ ರಜನಿಕಾಂತ್ ತಮಿಳು ಸಿನಿಮಾ ರಂಗದ ಮೂರನೇ ವ್ಯಕ್ತಿಯಾಗಿ ಫಾಲ್ಕೆ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.