ಭಾನುವಾರ, ಸೆಪ್ಟೆಂಬರ್ 19, 2021
29 °C

ಬಾಲಿವುಡ್‌ ನಟ ನಾಸಿರುದ್ದೀನ್ ಷಾ ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಹಿರಿಯ ಬಾಲಿವುಡ್‌ ನಟ ನಾಸಿರುದ್ದೀನ್ ಷಾ ಅವರಿಗೆ(70) ನ್ಯುಮೊನಿಯಾ ಇರುವುದು ಪತ್ತೆಯಾಗಿದ್ದು, ಅವರನ್ನು ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ’ ಎಂದು ಅವರ ಪತ್ನಿ ರತ್ನಾ ಪಾಠಕ್‌ ಅವರು ಬುಧವಾರ ತಿಳಿಸಿದರು.

ನಾಸಿರುದ್ದೀನ್ ಅವರನ್ನು ಖಾರ್‌ ಹಿಂದೂಜಾ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರ ಶ್ವಾಸಕೋಶದಲ್ಲಿ ನ್ಯುಮೊನಿಯಾದ ಸಣ್ಣ ಪ್ಯಾಚ್‌ಗಳಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಾಸಿರುದ್ದೀನ್  ಅವರು ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹಾಗಾಗಿ ಆಸ್ಪತ್ರೆಯಿಂದ ಶೀಘ್ರದಲ್ಲೇ ಬಿಡುಗಡೆಗೊಳ್ಳಬಹುದು ಎಂದು ರತ್ನಾ ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು