ಗುರುವಾರ , ಮಾರ್ಚ್ 23, 2023
30 °C

ನಟ ನಾಸಿರುದ್ದೀನ್ ಷಾ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್ ಷಾ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನಾಸಿರುದ್ದೀನ್ ಷಾ ಪುತ್ರ ವಿವಾನ್‌ ಷಾ ಅವರು ತಂದೆಯವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ಬೆಳಗ್ಗೆ ಬಿಡುಗಡೆಯಾದರು ಎಂದು ಪೋಟೊ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಜ್ವರ ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ನಾಸಿರುದ್ದೀನ್ ಷಾ ಅವರನ್ನು ಜೂನ್‌ 30ರಂದು ಇಲ್ಲಿನ ಖಾರ್‌ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಶ್ವಾಸಕೋಶದಲ್ಲಿ ನ್ಯೂಮೋನಿಯಾದ ಸಣ್ಣ ಪ್ಯಾಚ್‌ಗಳಿರುವುದು ಪತ್ತೆಯಾಗಿತ್ತು. ವೈದ್ಯರು ಕಳೆದೊಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಿದ್ದರು.

ಪೂರ್ಣ ಗುಣಮುಖರಾಗಿ ಅವರು ಮನೆಗೆ ಮರಳಿದ್ದಾರೆ ಎಂದು ನಾಸಿರುದ್ದೀನ್‌ ಷಾ ಅವರ ಪತ್ನಿ ರತ್ನಾ ಪಾಠಕ್‌ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು