ಭಾನುವಾರ, ಜೂನ್ 26, 2022
21 °C

ಚಲನಚಿತ್ರ ನಿರ್ದೇಶಕ ಬುದ್ಧದೇವ್‌ ದಾಸ್‌ಗುಪ್ತಾ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಖ್ಯಾತ ಚಲನಚಿತ್ರ ನಿರ್ದೇಶಕ ಬುದ್ಧದೇವ್‌ ದಾಸ್‌ಗುಪ್ತಾ ಅವರು (77) ವಯೋಸಹಜ ಕಾಯಿಲೆಯಿಂದಾಗಿ ಗುರುವಾರ ತಮ್ಮ ನಿವಾಸದಲ್ಲಿ ನಿಧನರಾದರು.

‘ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬುದ್ಧದೇವ್‌ ಅವರು ದೀರ್ಘಕಾಲದಿಂದ ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ವಾರದಲ್ಲಿ ಎರಡು ಬಾರಿ ನಿಯಮಿತವಾಗಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು’ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

 ಸಂತಾಪ ಸೂಚಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು,‘ಖ್ಯಾತ ಚಲನಚಿತ್ರ ನಿರ್ದೇಶಕ ಬುದ್ಧದೇವ್‌ ದಾಸ್‌ಗುಪ್ತಾ ಅವರ ನಿಧನದಿಂದ ಬಹಳ ದುಃಖವಾಗಿದೆ.  ಸಿನಿಮಾ ಜಗತ್ತಿಗೆ ಬಹುದೊಡ್ಡ ನಷ್ಟ ಉಂಟಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಸಿನಿಮಾ ನಿರ್ದೇಶಕ ಗೌತಮ್‌ ಘೋಷ್‌ ಕೂಡ ಬುದ್ಧದೇವ್‌ ದಾಸ್‌ಗುಪ್ತಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ಧಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.