ಶನಿವಾರ, ಜನವರಿ 29, 2022
17 °C

ಬಿಗ್ ಬಿ ಜೊತೆ ‘ಫಾರ್ ರಿಜಿಸ್ಟ್ರೇಷನ್‌’ ಮಾತುಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇತ್ತೀಚೆಗಷ್ಟೆ ‘ಫಾರ್ ರಿಜಿಸ್ಟ್ರೇಷನ್‌' ತಂಡ ಹಾಡಿನ ರೆಕಾರ್ಡಿಂಗ್ ಮುಗಿಸಿ, ಸಿನಿಮಾ ಪ್ರಿಯರಿಗೆ ಒಳ್ಳೆಯ ಸುದ್ದಿಯನ್ನು ನೀಡಿತ್ತು. ಇದರ ಬೆನ್ನಲ್ಲೆ ಈಗ ಮತ್ತೊಂದು ಹೊಸ ಸುದ್ದಿಯನ್ನು ನೀಡಿದೆ‌.

ಹೌದು‌, ‘ಫಾರ್  ರಿಜಿಸ್ಟ್ರೇಷನ್‌’ ಚಿತ್ರದ ನಿರ್ದೇಶಕ‌ ನವೀನ್ ದ್ವಾರಕನಾಥ್ ಅವರು ಖ್ಯಾತ ನಟ ಅಮಿತಾಬ್‌ಬಚ್ಚನ್‌ ಅವರನ್ನು ಕೌನ್‌ ಬನೇಗಾ ಕರೋಡ್‌ಪತಿ ಸ್ಟುಡಿಯೋದಲ್ಲಿ ಭೇಟಿಯಾಗಿದ್ದಾರೆ. ‘ಅಲ್ಲಿ ಚಿತ್ರದ ಕುರಿತೂ ಮಾತನಾಡಿ ಆಶೀರ್ವಾದ ಪಡೆದೆ. ಇದು ನನ್ನ ಜೀವನದ ಅತ್ಯಂತ ಸಂತೋಷದ ದಿನ’ ಎಂದಿದ್ದಾರೆ ದ್ವಾರಕಾನಾಥ್‌.

ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ಅಭಿನಯದ ‘ಫಾರ್ ರಿಜಿಸ್ಟ್ರೇಷನ್‌’ ಚಿತ್ರತಂಡ ಮೂರನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಖ್ಯಾತ ಖಳನಟ ರವಿಶಂಕರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಪೋಷಕ ನಟ ರಮೇಶ್ ಭಟ್, ಸುಧಾ ಬೆಳವಾಡಿ, ಬಾಬು ಹಿರಣ್ಣಯ್ಯ, ತುಳು ನಟ ಉಮೇಶ್ ಮಿಜಾರ್, ಮುಂಬೈ ನಟಿ ಶ್ರದ್ಧಾ ಸಾಲಿಯಾನ್, ತಬಲಾ ನಾಣಿ ಚಿತ್ರದಲ್ಲಿ ನಟಿಸಿರುವ ಪ್ರಮುಖರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು