ಸೋಮವಾರ, ಜೂನ್ 14, 2021
20 °C

ಮಾಲ್ಡೀವ್ಸ್‌ನಲ್ಲಿ ಮಜಾ, ಬಾಲಿವುಡ್ ಸೆಲೆಬ್ರಿಟಿಗಳಿಗೆ ನವಾಜುದ್ದೀನ್‌ ತರಾಟೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋವಿಡ್‌–19 ಪಿಡುಗಿನಿಂದಾಗಿ ದೇಶದ ಜನರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲೇ ಪ್ರವಾಸಕ್ಕೆ ತೆರಳಿ, ಆ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಸೆಲೆಬ್ರಿಟಿಗಳಿಗಳನ್ನು ಬಾಲಿವುಡ್‌ ನಟ ನವಾಜುದ್ದೀನ್ ಸಿದ್ದಿಕಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಲಿವುಡ್‌ ಹಂಗಾಮ ಜೊತೆ ಮಾತನಾಡಿರುವ ನವಾಜುದ್ದೀನ್‌, ‘ಇಡೀ ವಿಶ್ವವೇ ಸಂಕಷ್ಟದಲ್ಲಿ ಇರುವಾಗ ಈ ಸಿನಿಮಾ ಸೆಲೆಬ್ರಿಟಿಗಳು ತಮ್ಮ ಪ್ರವಾಸದ ಫೋಟೊಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ. ಜನರ ಬಳಿ ಊಟಕ್ಕೆ ಹಣ ಇಲ್ಲ, ಇವರು ಹಣ ಪೋಲು ಮಾಡುತ್ತಿದ್ದಾರೆ. ಸ್ವಲ್ಪ ನಾಚಿಕೆ ಇರಲಿ. ದೇಶದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಾಗುತ್ತಿದ್ದು, ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಸಂಕಷ್ಟದಲ್ಲಿ ಇರುವವರನ್ನು ಅಣಕಿಸಬೇಡಿ’ ಎಂದಿದ್ದಾರೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು