ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

39ನೇ ವಸಂತಕ್ಕೆ ಕಾಲಿಟ್ಟ ಲೇಡಿ ಸೂಪರ್‌ಸ್ಟಾರ್‌ ನಯನತಾರಾ

Published 18 ನವೆಂಬರ್ 2023, 7:08 IST
Last Updated 18 ನವೆಂಬರ್ 2023, 7:08 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಭಾರತದ ಲೇಡಿ ಸೂಪರ್‌ ಸ್ಟಾರ್‌ ಎಂದೇ ಖ್ಯಾತಿ ಪಡೆದಿರುವ ನಟಿ ನಯನತಾರಾ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ತೆಲುಗು, ತಮಿಳು, ಹಿಂದಿ ಸೇರಿದಂತೆ ಕನ್ನಡದಲ್ಲೂ ನಟಿಸಿರುವ ಅವರು ವಿಭಿನ್ನ ಪಾತ್ರಗಳಿಗೆ ಬಣ್ಣ ಹಚ್ಚಿರುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.

ನಯನತಾರಾ ಹುಟ್ಟುಹಬ್ಬದ ಪ್ರಯುಕ್ತ ಲೈಕಾ ಪ್ರೊಡಕ್ಷನ್‌, ಸನ್‌ ಪಿಕ್ಚರ್‌ ಸೇರಿದಂತೆ ಟಾಲಿವುಡ್‌, ಕಾಲಿವುಡ್‌ನ ಅನೇಕ ನಟ– ನಟಿಯರು ಶುಭ ಕೋರಿದ್ದಾರೆ.

ಈ ನಡುವೆ ಪತಿ ಹಾಗೂ ನಿರ್ದೇಶಕ ವಿಘ್ನೇಶ್‌ ಶಿವನ್‌ ಸಹ ವಿಡಿಯೊ ಹಂಚಿಕೊಳ್ಳುವ ಮೂಲಕ ಶುಭಕೋರಿದ್ದಾರೆ.

ಸುಮಾರು 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿ ನಯನತಾರಾ ಅಭಿನಯಿಸಿದ್ದಾರೆ. ಇತ್ತೀಚಿಗೆ ಬಾಲಿವುಡ್‌ ನಟ ಶಾರುಕ್‌ ಅವರೊಂದಿಗೆ ಜವಾನ್‌ ಚಿತ್ರದಲ್ಲಿ ತೆರೆ ಮೇಲೆ ಮಿಂಚಿದ್ದರು.

ಕಳೆದ ವರ್ಷ ಜೂನ್‌ನಲ್ಲಿ ವಿಘ್ನೇಶ್‌ ಶಿವನ್‌ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಈ ದಂಪತಿಗೆ ಉಯಿರ್​ ಮತ್ತು ಉಲಗಂ ಎಂಬ ಅವಳಿ ಮಕ್ಕಳಿದ್ದಾರೆ.

<div class="paragraphs"><p>ಚಿತ್ರಕೃಪೆ: ಇನ್‌ಸ್ಟಾಗ್ರಾಮ್‌&nbsp;</p></div>

ಚಿತ್ರಕೃಪೆ: ಇನ್‌ಸ್ಟಾಗ್ರಾಮ್‌ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT