ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಪತಿಯಲ್ಲಿ ನಟಿ ನಯನ ತಾರಾ, ವಿಘ್ನೇಶ್‌ ಶಿವನ್‌ ಮದುವೆ? ಇಲ್ಲಿದೆ ಮಾಹಿತಿ...

Last Updated 8 ಮೇ 2022, 10:45 IST
ಅಕ್ಷರ ಗಾತ್ರ

ತಿರು‍ಪತಿ: ಕಾಲಿವುಡ್‌ನ ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ನಟಿ ನಯನ ತಾರಾ ತಮ್ಮ ಬಹುಕಾಲದ ಗೆಳೆಯ ಚಿತ್ರ ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಮದುವೆಯಾಗಲಿದ್ದಾರೆ.

ಈ ಬಗ್ಗೆ ತಮಿಳುನಾಡಿನ ಮಾಧ್ಯಮಗಳು ವರದಿ ಮಾಡಿವೆ. ವಿಘ್ನೇಶ್‌ ಶಿವನ್‌ ಕುಟುಂಬದವರು ಕೂಡ ತಿರುಪತಿಯಲ್ಲಿ ಮದುವೆ ನಡೆಯಲಿದೆ ಎಂದು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಈ ಬಗ್ಗೆ ವಿಘ್ನೇಶ್‌ ಆಪ್ತರು ಮದುವೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜೂನ್‌ 9ರಂದುತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿವಾಹ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಇಬ್ಬರು ಕುಟುಂಬದವರು ಹಾಗೂ ಆಪ್ತರು ಮಾತ್ರ ಭಾಗವಹಿಸಲಿದ್ದಾರೆ.

ಇತ್ತೀಚೆಗೆ ತಿರುಪತಿ ದೇವಸ್ಥಾನಕ್ಕೆ ವಿಘ್ನೇಶ್‌ ಹಾಗೂ ನಯನ ತಾರಾಭೇಟಿ ನೀಡಿದ್ದರು. ಅವರು ದೇವಸ್ಥಾನಕ್ಕೆ ಭೇಟಿ ನೀಡಿರುವ ಚಿತ್ರಗಳು ಹಾಗೂ ವಿಡಿಯೊಗಳು ವೈರಲ್‌ ಆಗಿದ್ದವು.

2015ರಲ್ಲಿ ವಿಘ್ನೇಶ್ ನಿರ್ದೇಶನದ ‘ನಾನುಂ ರೌಡಿಧಾನ್’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ನಯನ ತಾರಾಮತ್ತು ವಿಘ್ನೇಶ್ ಶಿವನ್ ನಡುವೆ ಪ್ರೇಮಾಂಕುರವಾಗಿತ್ತು. ಸದ್ಯ ಇಬ್ಬರು ಚೆನ್ನೈನಲ್ಲಿ ಒಟ್ಟಿಗೆ ವಾಸವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT