ನಟ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದಲ್ಲಿ ಲೇಡಿ ಸೂಪರ್ಸ್ಟಾರ್, ಬಹುಭಾಷಾ ನಟಿ ತಮಿಳಿನ ನಯನತಾರಾ ಅವರು ಗಂಗಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಕುರಿತು ನಟ ಯಶ್ ಅವರೇ ಖುದ್ದು ನಟಿ ನಯನತಾರಾ ಅವರ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಪಾತ್ರಗಳ ಮಾಹಿತಿ ಹಂಚಿಕೊಳ್ಳಲಾಗಿತ್ತು. ಈಗ ನಟಿ ನಯನತಾರಾ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಗಂಗಾ ಹೆಸರಿನ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
.ಯಶ್ ಮತ್ತೊಂದು ಲುಕ್ ಅನಾವರಣ: ‘ಟಾಕ್ಸಿಕ್’ ಚಿತ್ರತಂಡದಿಂದ ಬಿಗ್ ಅಪ್ಡೇಟ್ .ನಯನತಾರಾ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ ಪತಿ ವಿಘ್ನೇಶ್ ಶಿವನ್.
ರಿಲೀಸ್ ಆದ ಪೋಸ್ಟರ್ನಲ್ಲಿ ನಟಿ ನಯನತಾರಾ ದುಬಾರಿ ಪಾರ್ಟಿ ಹಾಲ್ಗೆ ಕೈಯಲ್ಲಿ ಗನ್ ಹಿಡಿದು ಆಗಮಿಸಿದ್ದಾರೆ. ಗಂಗಾಳ ಹಿಂಭಾಗದಲ್ಲಿ ವಿದೇಶಿಗರು ಕಾವಲು ನಿಂತಿದ್ದಾರೆ. ಈ ಪೋಸ್ಟರ್ನಲ್ಲಿ ನಟಿಯ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂನ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಯಶ್ ಅವರು ಗೀತು ಜೊತೆ ಸೇರಿ ಕಥೆ ಬರೆದಿದ್ದಾರೆ. 2026 ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದ್ದು, ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.