ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಮೂರಿ ಬಾಲಕೃಷ್ಣ, ದುನಿಯಾ ವಿಜಯ್ ನಟನೆಯ NBK107 ಚಿತ್ರದ ವಿಶೇಷ ಟೀಸರ್ ಬಿಡುಗಡೆ

ಅಕ್ಷರ ಗಾತ್ರ

ಹೈದರಾಬಾದ್‌: ತೆಲುಗು ಮಾಸ್ ನಟ ನಂದಮುರಿ ಬಾಲಕೃಷ್ಣ ಅವರ 107 ನೇ ಚಿತ್ರ ಇತ್ತೀಚೆಗಷ್ಟೇ ಘೋಷಣೆ ಆಗಿತ್ತು. ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿರುವ ಹಾಗೂ ಡಾನ್ ಸೀನು, ಕ್ರ್ಯಾಕ್ ಖ್ಯಾತಿಯ ಗೋಪಿಚಂದ್ ಮಾಲಿನೇನಿ ನಿರ್ದೇಶನದಲ್ಲಿ NBK107 ಪ್ರಾಜೆಕ್ಟ್‌ಗೆ ಚಾಲನೆ ನೀಡಲಾಗಿದೆ.

ವಿಶೇಷವೆಂದರೆ ಇಂದು ಬಾಲಕೃಷ್ಣ ಅವರ ಜನ್ಮದಿನದ ಪ್ರಯುಕ್ತ (ಜೂನ್ 10) NBK107 ಸಿನಿಮಾದ ಮ್ಯಾಸಿವ್ ಟೀಸರ್ ಬಿಡುಗಡೆ ಮಾಡಲಾಗಿದ್ದು, ಎನ್‌ಬಿಕೆ ಅವರು ಅಖಂಡ ಸಿನಿಮಾ ನಂತರ ಮತ್ತೊಂದು ಮಾಸ್ ಸಿನಿಮಾದೊಂದಿಗೆ ಭರ್ಜರಿ ಎಂಟ್ರಿ ಕೊಡುತ್ತಿದ್ದಾರೆ.

ಈ ಚಿತ್ರದಲ್ಲಿ ದುನಿಯಾ ವಿಜಯ್ ಖಳ ಪಾತ್ರದಲ್ಲಿ ನಟಿಸುತ್ತಿದ್ದು ಟೀಸರ್‌ನಲ್ಲಿ ಅವರ ಬಗ್ಗೆ ಗುಟ್ಟನ್ನು ಬಿಟ್ಟು ಕೊಟ್ಟಿಲ್ಲ.

ಚಿತ್ರ ನಿರ್ಮಾಣದ ಬಗ್ಗೆ ಮೈತ್ರಿ ಮೂವಿ ಮೇಕರ್ಸ್ ಟ್ವಿಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಈ ಚಿತ್ರ ಕೌಟುಂಬಿಕ ಕಥಾ ಹಂದರವನ್ನು ಹೊಂದಿದ್ದು, ಬಾಲಕೃಷ್ಣ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನು ಬಾಲಕೃಷ್ಣ ಅವರಿಗೆ ಸೌತ್ ಸಿನಿ ಸ್ಟಾರ್ ಶ್ರುತಿಹಾಸನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT