ಸೋಮವಾರ, ಜನವರಿ 17, 2022
21 °C

ಕಪಿಲ್‌ ದೇವ್ ಹುಟ್ಟುಹಬ್ಬಕ್ಕೆ ಶುಭ ಕೋರಿ ಚಿತ್ರ ಹಂಚಿಕೊಂಡ ನಟಿ ನೇಹಾ ಧೂಪಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರಿಗೆ ಬಾಲಿವುಡ್‌ ನಟಿ ನೇಹಾ ಧೂಪಿಯಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. 

ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಹಂಚಿಕೊಂಡಿರುವ ನೇಹಾ, ‘ಹುಟ್ಟುಹಬ್ಬದ ಶುಭಾಶಯ ಕಪಿಲ್‌ ಸರ್. ನಮ್ಮ ಹೆಣ್ಣು ಮಗುವಿಗೆ ನಿಮ್ಮ ಮುದ್ದಾದ ಪುಟ್ಟ ಬೆಕ್ಕಿನ ವಿಡಿಯೊಗಳನ್ನು ತೋರಿಸುತ್ತಿದ್ದೀರಿ. ನಾವು ನಿನ್ನನ್ನು ಪ್ರೀತಿಸುತ್ತೇವೆ’ ಎಂದು ಬರೆದಿದ್ದಾರೆ.

ನೇಹಾ ಹಂಚಿಕೊಂಡಿರುವ ಫೋಟೊಗಳಲ್ಲಿ ಪತಿ ಅಂಗದ್ ಬೇಡಿ ಮತ್ತು ಅವರ ಮಗಳು ಮೆಹರ್, ಕಪಿಲ್ ದೇವ್ ಮತ್ತು ಅವರ ಪತ್ನಿ ರೋಮಿ ಇದ್ದಾರೆ.

ಕಪಿಲ್‌ ದೇವ್‌ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ಹೊಂದಿರುವ ‘83' ಚಿತ್ರವು ಡಿಸೆಂಬರ್‌ 24ರಂದು ಬಿಡುಗಡೆಯಾಗಿದೆ.  

ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಂಡಿರುವ ‘83’ ಚಿತ್ರವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಹಾಗೂ ಕಪಿಲ್‌ ದೇವ್‌ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು