ಹೊಸಬರ ‘ಪರಿಮಳ ಡಿಸೋಜಾ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ವಿನೋದ್ ಶೇಷಾದ್ರಿ ಚಿತ್ರದ ‘ವಿಲೇಜ್ ರೋಡ್ ಫಿಲಂಸ್’ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಗಿರಿಧರ್ ಹೆಚ್.ಟಿ ನಿರ್ದೇಶಕರು.
‘ಈ ಚಿತ್ರ ನಿರ್ಮಾಣ ಮಾಡುವ ಪ್ರಮುಖ ಪಾತ್ರ ಕೂಡ ಮಾಡಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಆ್ಯಕ್ಷನ್, ಸೆಂಟಿಮೆಂಟ್, ಮನರಂಜನೆ ಇರುವ ಕೌಟುಂಬಿಕ ಚಿತ್ರ. ನಟಿ ಭವ್ಯ ಸೇರಿದಂತೆ ಚಿತ್ರದಲ್ಲಿ ಒಟ್ಟು 107 ಕಲಾವಿದರು ನಟಿಸಿದ್ದಾರೆ’ ಎಂದು ವಿನೋದ್ ಶೇಷಾದ್ರಿ ಹೇಳಿದರು.
‘ಹಿಂದೂ ಕುಟುಂಬದ ಮನೆಗೆ ಕ್ರಿಶ್ಚಿಯನ್ ಹುಡುಗಿ ಸೊಸೆಯಾಗಿ ಬರುತ್ತಾರೆ. ಎಲ್ಲವೂ ಚೆನ್ನಾಗಿ ನಡೆಯುತ್ತಿರುವಾಗ ಒಂದು ಘಟನೆ ನಡೆಯುತ್ತದೆ ಆ ಘಟನೆ ಏನು? ಅದರಿಂದ ಏನೆಲ್ಲಾ ಆಗುತ್ತದೆ ಎಂಬುದೇ ಈ ಚಿತ್ರದ ಕಥಾವಸ್ತು’ ಎಂದರು ನಿರ್ದೇಶಕರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.