ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ಹಾಡುಗಳಿಗೆ ಹೆಜ್ಜೆ

Published 28 ಫೆಬ್ರುವರಿ 2024, 23:30 IST
Last Updated 28 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸುತ್ತಿರುವ ‘ಗೌರಿ’ ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ. ಇದರ ಬೆನ್ನಲ್ಲೇ ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಲು ಚಿತ್ರತಂಡ ಆಲೋಚಿಸಿದೆ. 

ಮಾ.17 ಪುನೀತ್ ಹುಟ್ಟುಹಬ್ಬ. ಅಂದು ‘ಗೌರಿ’ ಚಿತ್ರತಂಡ ವಿಶೇಷ ಗೀತೆಯೊಂದನ್ನು ಬಿಡುಗಡೆ ಮಾಡಲಿದೆ. ಪುನೀತ್‌ ಚಿತ್ರದ ಜನಪ್ರಿಯ ಹಾಡುಗಳಿಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. 

‘ಪುನೀತ್ ಅವರ ಡ್ಯಾನ್ಸ್ ನನಗೆ ಸ್ಫೂರ್ತಿ. ಅವರಿಗೆ ಈ ಗೀತೆಯ ಮೂಲಕ ನಮನ ಸಲ್ಲಿಸುತ್ತಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡು ಬಿಡುಗಡೆ ಮಾಡುತ್ತೇವೆ’ ಎಂದರು ನಾಯಕ
ಸಮರ್ಜಿತ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT